ಕುಣಿಗಲ್: ತಾಲೂಕಿನ ಡಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ನರೇಗ ಯೋಜನೆಯಡಿಯಲ್ಲಿ ಆರಂಭಿಸಲಾಗಿರುವ ರಾಜೀವ್ಗಾಂಧಿ ಸೇವಾ ಕೇಂದ್ರದ ಕಳೆದ ನಾಲ್ಕು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿದ್ದು ಕಾಮಗಾರಿ ಪೂರ್ಣ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಪಂ ಮಾಜಿ ಸದಸ್ಯ ಕೃಷ್ಣ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿವರ ನೀಡಿದ ಅವರು 2020- 21ರಲ್ಲಿ ನರೇಗ ಯೋಜನೆಯಡಿಯಲ್ಲಿ ಡಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ಕಾರ್ಯ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಾಣಕ್ಕೆ ಮುಂದಾಗಿದ್ದು ನರೇಗ ಯೋಜನೆಯಡಿಯಲ್ಲಿ 35ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿತ್ತು, ಮೊದಲ ಹಂತದಲ್ಲಿ 15ಲಕ್ಷ ರೂ. ವೆಚ್ಚದಲ್ಲಿ ತಳಪಾಯ ಹಾಕಿ ಪಿಲ್ಲರ್ ಗೆ ಕಬ್ಬಿಣದ ಕಂಬಿಗಳನ್ನು ಅಳವಡಿಸಿದ್ದು ಬಿಟ್ಟರೆ ಕಳೆದ ನಾಲ್ಕು ವರ್ಷಗಳಿಂದ ಕಾಮಗಾರಿ ಅಷ್ಟರಲ್ಲೆ ನಿಂತಿದೆ, ಪಿಲ್ಲರ್ ಗೆ ಅಳವಡಿಸಲಾಗಿರುವ ಕಬ್ಬಿಣದ ಸರಳುಗಳು ಗಾಳಿ, ಮಳೆಗೆ ತುಕ್ಕು ಹಿಡಿದು ಕ್ಷಮತೆ ಕಳೆದು ಕೊಳ್ಳುವಂತಾಗಿದೆ, ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಗ್ರಾಪಂ ಪಿಡಿಒಗೆ ಹಲವಾರು ಬಾರಿ ಮನವಿ ಮಾಡಿದರೂ ಪಿಡಿಒ ತುರ್ತು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಕಾರಣ ಸೇವಾ ಕೇಂದ್ರದ ಕಾಮಗಾರಿ ಕುಂಟುತ್ತಾ ಸಾಗಿದ್ದು, ಸಾರ್ವಜನಿಕರ ತೆರಿಗೆ ಹಣ ಈಗಾಗಲೆ 15 ಲಕ್ಷ ವ್ಯಯಿಸಿದ್ದು ವ್ಯರ್ಥವಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿರುವ ಅವರು ಇನ್ನಾದರೂ ಈ ಭಾಗದ ಗ್ರಾಮ ಪಂಚಾಯಿತಿ ಜನರ ಸದುಪಯೋಗಕ್ಕೆ ಸೇವಾ ಕೇಂದ್ರದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿರುವ ಅವರು ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ಹರಿಸಿ ಕೇಂದ್ರದ ಕಾಮಗಾರಿ ಪೂರ್ಣ ಗೊಳಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.