ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಕಾರ್ಯಕರ್ತ ಕಿಡಿ

25

Get real time updates directly on you device, subscribe now.


ಕುಣಿಗಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಕ್ರಮ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ನೇತೃತ್ವದಲ್ಲಿ ಹುಚ್ಚಮಾಸ್ತಿ ಗೌಡ ವೃತ್ತದಲ್ಲಿ ಜಮಾವಣೆ ಗೊಂಡ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ಧೋರಣೆ ಖಂಡಿಸಿ ಘೋಷಣೆ ಕೂಗಿ ತಾಲೂಕು ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಭೆಯನ್ನುದ್ದೇಶಿಸಿ ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ ಮಾತನಾಡಿ, ಇಡೀದೇಶಕ್ಕೆ ಮಾದರಿಯಾಗುವಂತಹ ಹಲವು ಜನಪರ ಕಾರ್ಯಕ್ರಮ ನೀಡಿ ಯಶಸ್ವಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಧಕ್ಕೆ ತರಲೆಂದು ಪ್ರಧಾನಿ ನರೇಂದ್ರ ಮೋದಿ, ಗೃಹಮಂತ್ರಿ ಅಮಿತ್ ಷಾ ರಾಜ್ಯಪಾಲರನ್ನು ದಾಳವಾಗಿಸಿಕೊಂಡು ಯಾವುದೇ ತಪ್ಪು ಮಾಡದ ಸಿಎಂ ಸಿದ್ದರಾಮಯ್ಯನವರ ಮೇಲೆ ತನಿಖೆಗೆ ಅನುಮತಿ ನೀಡಿದ್ದಾರೆ, ಕೇಂದ್ರದ ಬಿಜೆಪಿ ಸರ್ಕಾರವು ರಾಜಪಾಲರನ್ನು ಬಳಸಿಕೊಂಡು ರಾಜ್ಯದಲ್ಲಿ ಸರ್ಕಾರದ ವಿರುದ್ಧ ಕುತಂತ್ರ ನಡೆಸುತ್ತಿರುವುದು ಖಂಡನೀಯ, ರಾಜ್ಯಪಾಲರು ತಮ್ಮ ಘನತೆ ಅರಿತು ನಡೆದುಕೊಳ್ಳ ಬೇಕೆ ಹೊರತು ಸಂವಿಧಾನ, ಕಾನೂನಿನ ಅಂಶಗಳನ್ನು ಗಾಳಿಗೆ ತೂರಿ ಯಾವುದೆ ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದು ಆ ಹುದ್ದೆಗೆ ಶೋಭೆ ತರುವುದಿಲ್ಲ, ಇಂತಹ ಬೆಳವಣಿಗೆಗಳು ಸಾಂವಿಧಾನಿಕ ಘರ್ಷಣೆಗೆ ಕಾರಣವಾಗುವುದರಿಂದ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. ವಿವಿಧ ಮುಖಂಡರು ಮಾತನಾಡಿ ತಹಶೀಲ್ದರ್ ರಶ್ಮಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Get real time updates directly on you device, subscribe now.

Comments are closed.

error: Content is protected !!