ತುಮಕೂರು: ಪ್ರಪಂಚದಲ್ಲಿ ಡಾಕ್ಟರ್, ಇಂಜಿನಿಯರ್, ವಿಜ್ಞಾನಿ, ವಕೀಲರಾಗಲು ಕಾಲೇಜುಗಳಿವೆ, ಆದರೆ ಮಾನವೀಯತೆ, ಸಹೋದರತೆ, ಪರಸ್ವರ ಪ್ರೀತಿಯಿಂದ ಸತ್ಪ್ರಜೆಯಾಗಿ ಬದುಕುವುದನ್ನು ಕಲಿಸುವ ಯಾವ ಕಾಲೇಜುಗಳು ಇಲ್ಲ, ಹಾಗಾಗಿಯೇ ಸಾಂಪ್ರದಾಯಕ ಶಿಕ್ಷಣದ ಜೊತೆಗೆ ಧಾರ್ಮಿಕ ಮತ್ತು ಲೌಕಿಕ ಜ್ಞಾನದ ಶಿಕ್ಷಣವೂ ಅಗತ್ಯವಿದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಧ್ಹಾನ್ ಪ್ಯಾಲೇಸ್ ನಲ್ಲಿ ಸ್ಟೂಡೆಂಟ್ ಇಸ್ಲಾಮಿಕ್ ಅರ್ಗೈನೇಜೇಷನ್ ಅಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 18ನೇ ವರ್ಷದ ಪ್ರತಿಭಾಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿ, ಶಿಕ್ಷಣವೆಂದರೆ ಬದುಕಿನ ಎಲ್ಲಾ ಸಮಸ್ಯೆ ಎದುರಿಸಿ ಎಲ್ಲರಲ್ಲಿಯೂ ಸಂತೋಷ ಉದ್ದೀಪನಗೊಳಿಸುವುದೇ ಆಗಿದೆ, ಈ ನಿಟ್ಟಿನಲ್ಲಿ ಎಸ್ ಐ ಓ ಕೆಲಸ ಶ್ಲಾಘನೀಯ ಎಂದರು.
ಎಸ್ ಐ ಓ ರಾಜ್ಯ ಕಾರ್ಯದರ್ಶಿ ಮಹಮದ್ ನಾಸೀರ್ ಮಾತನಾಡಿ, ಕಳೆದ 40 ವರ್ಷಗಳಿಂದ ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಎಸ್ ಐ ಓ ತೊಡಗಿಕೊಂಡಿದೆ, ಕಳೆದ 22 ವರ್ಷಗಳಿಂದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಾ ಬಂದಿದೆ, ಕೋವಿಡ್ ನಿಂದಾಗಿ ನಾಲ್ಕು ವರ್ಷಗಳ ಕಾಲ ಪ್ರತಿಭಾ ಪುರಸ್ಕಾರ ಮಾಡಲು ಸಾಧ್ಯವಾಗಲಿಲ್ಲ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಲೋಕಜ್ಞಾನದ ಅರಿವು ಮೂಡಿಸುವುದೇ ಎಸ್ ಐ ಓ ಉದ್ದೇಶವೆಂದರು.
ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಮಾಜಿ ಶಾಸಕರಾದ ಎಸ್.ಷಫಿ ಅಹಮದ್, ಡಾ.ರಫೀಕ್ ಅಹಮದ್, ಮುಖಂಡರಾದ ಇಕ್ಬಾಲ್ ಅಹಮದ್, ಎಸ್ಪಿ ಅಶೋಕ.ಕೆ.ವಿ, ಶಾಹೀನ್ ಗ್ರೂಫ್ ಆಫ್ ಎಜುಕೇಷನ್ ನ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಶಬ್ಬೀರ್ ಅಹಮದ್, ಪ್ರೊ.ಅಸಾದುಲ್ಲಾ ಖಾನ್, ತಾಜುದ್ದೀನ್ ಷರೀಫ್, ಅಬ್ದುಲ್ ಜಬ್ಬರ ಸಾಬ್, ಪಿಯು ಡಿಡಿಪಿಐ ಡಾ.ಬಾಲ ಗುರುಮೂರ್ತಿ, ಎಸ್ ಐಓ ಜಿಲ್ಲಾಧ್ಯಕ್ಷ ಖಲೀಲ್ ಹಾಜರಿದ್ದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಪುರಸ್ಕರಿಸಲಾಯಿತು.
Comments are closed.