ಕ್ರೀಡಾಸಕ್ತಿ ಬೆಳೆಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ

ತಾಲ್ಲೂಕು ಮಟ್ಟದ ಪ.ಪೂ.ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

18

Get real time updates directly on you device, subscribe now.


ತುಮಕೂರು: ಆರೋಗ್ಯಕರ ದೇಹ ಕಾಪಾಡಿಕೊಂಡರೆ ಆರೋಗ್ಯಕರ ಮನಸ್ಥಿತಿ, ಆಲೋಚನೆ ಹೊಂದಲು ಸಾಧ್ಯ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು, ವಿದ್ಯಾರ್ಥಿಗಳಲ್ಲಿನ ಕ್ರೀಡಾ ಪ್ರತಿಭೆ ಅನಾವರಣಗೊಳಿಸಿ ಬೆಳೆಸಲು ಸರ್ಕಾರ ಶಾಲಾ ಕಾಲೇಜು ಹಂತದಲ್ಲಿ ಕ್ರೀಡಾಕೂಟ ಆಯೋಜಿಸುತ್ತದೆ, ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರು ಮೂರ್ತಿ ಹೇಳಿದರು.

ಗುರುವಾರ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಆಯೋಜಿಸಿದ್ದ ತುಮಕೂರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿನ ಹಲವು ಪದವಿ ಪೂರ್ವ ಕಾಲೇಜುಗಳ ಮಕ್ಕಳು ಕ್ರೀಡಾಕೂಟಕ್ಕೆ ಬಂದಿಲ್ಲ, ಮಕ್ಕಳನ್ನು ಕ್ರೀಡಾಕೂಟಕ್ಕೆ ಅಣಿಗೊಳಿಸಿ ಕರೆತರಲು ಕಾಲೇಜು ಸಂಸ್ಥೆಗಳು ಪ್ರಯತ್ನ ಮಾಡಿಲ್ಲ, ಅಂತಹ ಕಾಲೇಜುಗಳಿಗೆ ನೋಟೀಸ್ ನೀಡುವುದಾಗಿ ಎಚ್ಚರಿಕೆ ನೀಡಿದರು.

ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಂಗೀತ, ಸಾಹಿತ್ಯದಂತಹ ಹವ್ಯಾಸ ಬೆಳೆಸಿಕೊಂಡರೆ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗುತ್ತದೆ, ಆದರೆ ಆವಕಾಶ ಸಿಗದೆ ಅನೇಕ ಪ್ರತಿಭೆಗಳು ಬೆಳಕಿಗೆ ಬರುವುದಿಲ್ಲ, ಕ್ರೀಡೆಗೆ ಸರ್ಕಾರ ಹೆಚ್ಚು ಉತ್ತೇಜನ ನೀಡುತ್ತಿದೆ, ಇವುಗಳನ್ನು ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು, ಕ್ರೀಡಾ ಕೋಟಾದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಹೇಳಿದರು.

ಆರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿ ಸ್ವೀಕಾರ ಮಾಡಿದ ಉಪ ನಿರ್ದೇಶಕ ಡಾ.ಬಾಲಗುರು ಮೂರ್ತಿಯವರು ಟೆಕ್ವಾಂಡೋ ಕ್ರೀಡೆಯಲ್ಲಿ ಸಾಧನೆ ಮಾಡಿದ ಬಿ.ಪುಷ್ಪಕ್ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ರೋಹಿತ್ ಗಂಗಾಧರ್ ಅವರನ್ನು ಸನ್ಮಾನಿಸಿದರು.
ಶಾಲಾ ಶಿಕ್ಷಣ ಇಲಾಖೆ ಕ್ರೀಡಾ ಶಾಖೆ ಸಂಚಾಲಕ ಟಿ.ಆರ್.ಬಸವರಾಜು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಕಾರ್ಯಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಚಂದ್ರಶೇಖರ ಆರಾಧ್ಯ, ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜು ಬೋಧಕ- ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಬಿ.ಆರ್.ಮಂಜುನಾಥ್, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಹಾಲಿಂಗೇಶ್, ಕೆ.ಟಿ.ಮಂಜುನಾಥ್ ಸೇರಿದಂತೆ ತಾಲ್ಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!