ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿ ಆರೋಗ್ಯವಾಗಿರಿ

ವಾಂತಿ, ಭೇದಿ ಪ್ರಕರಣಕ್ಕೆ ಕಲುಷಿತ ನೀರು ಕಾರಣವಲ್ಲ: ಶುಭಕಲ್ಯಾಣ್

7

Get real time updates directly on you device, subscribe now.


ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.
ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದ ನಂತರ ಮಾತನಾಡಿ, ನೀರನ್ನು ಕಾಯಿಸಿ- ಆರಿಸಿ ಕುಡಿಯಬೇಕು, ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಶೌಚಕ್ಕಾಗಿ ಶೌಚಾಲಯವನ್ನೇ ಬಳಸಬೇಕು, ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಶುಚಿಗೊಳಿಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಗ್ರಾಮದ ಮನೆ- ಮನೆ ಭೇಟಿ ನೀಡಿ ಮನೆಯ ಸದಸ್ಯರ ಆರೋಗ್ಯದ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರಲ್ಲದೆ ಬರುವ ಆಗಸ್ಟ್ 31ರಂದು ಶ್ರಾವಣ ಮಾಸದ ಕಡೆಯ ಶನಿವಾರ ಇರುವುದರಿಂದ ಗ್ರಾಮಗಳ ದೇವಾಲಯಗಳಲ್ಲಿ ವಿಶೇಷ ಪೂಜೆ, ಜಾತ್ರೆ ನಡೆಯುವುದರಿಂದ ಅಧಿಕಾರಿಗಳು ಸ್ವಚ್ಛತೆ, ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ವಾಂತಿ- ಭೇದಿ ಪ್ರಕರಣಗಳು ಮರುಕಳಿಸದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಕೆ.ಮಂಜುನಾಥ್, ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಆಹಾರ ಸುರಕ್ಷತಾಧಿಕಾರಿ ಡಾ.ಹರೀಶ್, ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!