ತುಮಕೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವೀಸ್ ಓಡಾಟಕ್ಕೆ ರೈಲ್ವೆ ಇಲಾಖೆ ಸೆಪ್ಟೆಂಬರ್ 2ರಂದು ಅನುಮೋದನೆ ನೀಡಿದೆ ಎಂದು ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಜಿಲ್ಲಾ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ.
ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜನತೆಯ ಬಹು ದಿನಗಳ ಬೇಡಿಕೆ ನೆರವೇರಿದಂತಾಗಿದೆ.
ಈ ಮೆಮು ರೈಲು ತುಮಕೂರು- ಯಶವಂತಪುರ ಮೆಮು ಟ್ರೈನ್ ಬೆಳಗ್ಗೆ 8.55ಕ್ಕೆ ತುಮಕೂರಿಂದ ಹೊರಟು ಬೆಳಗ್ಗೆ 10.25ಕ್ಕೆ ಯಶವಂತಪುರ ತಲುಪಲಿದೆ,ಯಶವಂತ ಪುರದಿಂದ ಸಂಜೆ 5.40ಕ್ಕೆ ಹೊರಟು ಸಾಯಂಕಾಲ 7.05ಕ್ಕೆ ತುಮಕೂರು ತಲುಪಲಿದೆ, ಪ್ರತಿ ಸೋಮವಾರ ವಿಶೇಷ ಮೆಮು ಟ್ರೈನ್ ಬಾಣಸವಾಡಿ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 6.15ಕ್ಕೆ ಹೊರಟು ತುಮಕೂರಿಗೆ ಬೆ.8.35ಕ್ಕೆ ತಲುಪಲಿದೆ, ಅದೇ ರೀತಿ ಪ್ರತಿ ಶನಿವಾರ ವಿಶೇಷ ಮೆಮು ಟ್ರೈನ್ ತುಮಕೂರಿನಿಂದ ಸಾಯಂಕಾಲ 7.40ಕ್ಕೆ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.
Comments are closed.