ಕುಣಿಗಲ್: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ಧಾರುಣ ಘಟನೆ ಪಟ್ಟಣದ 22ನೇ ವಾರ್ಡ್ನಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಸ್ಪಂದನ (13) ಎಂದು ಗುರುತಿಸಲಾಗಿದ್ದು, ಈಕೆ 22ನೇ ವಾರ್ಡ್ ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮನ್ ಕುಮಾರ್ ಎಂಬುವವರ ಮಗಳು, ಶುಕ್ರವಾರ ಮನೆಯವರೊಂದಿಗೆ ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ತೆರಳಿದ್ದಳು, ಬಾಲಕಿ ದೇವಾಲಯ ಸಮೀಪದಲ್ಲಿದ್ದ ಬೆಂಚ್ ಮೇಲೆ ಕುಳಿತಿದ್ದು, ಈ ವೇಳೆ ಹಾವು ಕಡಿತಕ್ಕೆ ಒಳಗಾಗಿದ್ದಾಳೆ, ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದು ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಳು, ಮನೆಯವರು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರಿಸ್ಥಿತಿ ಕೈಮೀರಿ ಹೆಚ್ಚಿನ ಚಿಕಿತ್ಸೆಗೆ ಬೆಳ್ಳೂರ್ ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ, ಬಾಲಕಿಯು ಕೆಆರ್ಎಸ್ ಅಗ್ರಹಾರದ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
Get real time updates directly on you device, subscribe now.
Prev Post
Comments are closed.