90 ಕಿ.ಮೀ. ಮಾನವ ಸರಪಳಿ ನಿರ್ಮಾಣ: ಡೀಸಿ

ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

19

Get real time updates directly on you device, subscribe now.


ತುಮಕೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದ ವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾ ಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು, ಭಾರತ ದೇಶದಲ್ಲಿ ಪ್ರಜಾಪ್ರಭತ್ವ ಗಟ್ಟಿಗೊಳಿಸಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುವುದೆಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಮಾನವ ಸರಪಳಿಯಲ್ಲಿ ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ- ಸಂಸ್ಥೆಗಳು, ಕಲಾವಿದರು, ಕ್ರೀಡಾಪಟುಗಳು, ಮಹಿಳಾ ಸಂಘಟನೆಗಳು, ರೈತ ಬಾಂಧವರು, ಸಾಹಿತಿಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 15 ರಂದು ಸಂವಿಧಾನ ಪೀಠಿಕೆ ಬೋಧನೆ, 90 ಕಿ.ಮೀ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಹಾಗೂ ಪ್ರಜಾ ಪ್ರಭುತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿದ್ದ ವಿವಿಧ ಸಂಘಟನೆಗಳ ಮುಖಂಡರು ಪ್ರಜಾಪ್ರಭುತ್ವ ಕಾರ್ಯಕ್ರಮವನ್ನು ದಲಿತ ಮುಖಂಡರಿಗಷ್ಟೇ ಸೀಮಿತಗೊಳಿಸದೆ ಎಲ್ಲಾ ಇಲಾಖೆ, ಸಂಘ ಸಂಸ್ಥೆಗಳನ್ನು ತೊಡಗಿಸಿಕೊಳ್ಳಬೇಕು, ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಕಾಲೇಜು, ಇಂಜನಿಯರಿಂಗ್ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದು, ಅವರನ್ನು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!