ಅರ್ಥಪೂರ್ಣವಾಗಿ ವಿಶ್ವಕರ್ಮ ಜಯಂತಿ ಆಚರಿಸಿ

11

Get real time updates directly on you device, subscribe now.


ತುಮಕೂರು: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 17 ರಂದು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕರ್ಮ ಸಮುದಾಯವನ್ನು ಗುರುತಿಸಿ ಸಮುದಾಯದ ಇತಿಹಾಸ, ಪರಂಪರೆ, ಸಂಸ್ಕೃತಿ, ಆಚರಣೆಗಳ ಬಗ್ಗೆ ಜನರಿಗೆ ತಿಳಿಸಲು ಸರ್ಕಾರವು ವಿಶ್ವಕರ್ಮ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದೆ. ಇಂದಿನ ಯುವ ಪೀಳಿಗೆ ತಮ್ಮ ಸಮುದಾಯಗಳ ಇತಿಹಾಸವನ್ನೇ ಮರೆತು ಬಿಟ್ಟಿದ್ದಾರೆ. ಆಚರಣೆಗಳ ಹಿನ್ನೆಲೆ, ಮಹತ್ವ ತಿಳಿಸಲು ಇಂತಹ ಜಯಂತಿ ಕಾರ್ಯಕ್ರಮ ಅನಿವಾರ್ಯ ಎಂದು ತಿಳಿಸಿದರು.

ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ಬಗ್ಗೆ ಅರಿವು ಮೂಡಿಸಲು ವಿಶೇಷ ಉಪನ್ಯಾಸ, ಸಮುದಾಯದ 5 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ ಮಿರ್ಜಿ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುರೇಶ್, ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಚ್.ವಿ. ಹೆಬ್ಬೂರು ನಾಗರಾಜಾಚಾರ್, ಪ್ರಾಧ್ಯಾಪಕ ಕೆ.ವಿ.ಕೃಷ್ಣಮೂರ್ತಿ ಸೇರಿದಂತೆ ಸಮುದಾಯದ ಮುಖಂಡರಾದ ಜೆ.ಎಂ.ಗೋಪಾಲ ಕೃಷ್ಣ, ಎಸ್. ಹರೀಶ್ ಆಚಾರ್ಯ, ಚೇತನ್, ಶಶಿಧರ್, ನವೀನ್, ಟಿ.ಪಿ. ಡಮರುಗೇಶ್, ಚಂದ್ರಾಚಾರ್ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!