ಅಂಗನವಾಡಿ ಆಹಾರ ಅತ್ಯಂತ ಕಳಪೆ

ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಆರೋಪ

11

Get real time updates directly on you device, subscribe now.


ತುಮಕೂರು: ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರ ಅಪೌಷ್ಟಿಕತೆಯಿಂದ ಕೂಡಿದ್ದು ಸಿಬಿಐ ತನಿಖೆಗೆ ಆಗ್ರಹಿಸಿದದರು.
ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೆ ಆಹಾರ ಪೂರೈಕೆಯಲ್ಲಿ ದೊಡ್ಡಮಟ್ಟದ ಹಣಕಾಸಿನ ಅವ್ಯವಹಾರ ನಡೆಯುತ್ತಿದೆ, ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ, ಇದನ್ನು ತಿನ್ನುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ್ದು ಸಿಬಿಐ ಮೂಲಕ ತನಿಖೆಗೊಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಹಿಂದುಳಿದ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗಿದೆ, ಇಂಥ ಮಕ್ಕಳಿಗೆ ಮನೆಯಲ್ಲಿ ಸಮರ್ಪಕವಾದ ಪೌಷ್ಟಿಕ ಆಹಾರ ಸಿಗುವುದಿಲ್ಲ ಎಂದು ಸರ್ಕಾರವೇ ಎಲ್ಲಾ ಪೌಷ್ಟಿಕ ಅಂಶಗಳು ಇರುವಂಥ ಆಹಾರ ತಯಾರು ಮಾಡಿ ಅವರಿಗೆ ಉಣ ಬಡಿಸಬೇಕು ಎಂದು (ಎಂ ಎಸ್ ಪಿಸಿ) ಮಹಿಳೆಯರು ಮತ್ತು ಮಕ್ಕಳಿಗೆ ಪೋಷಕಾಂಶ ಪೂರೈಸುವ ಯೋಜನೆ ರೂಪಿಸಲಾಗಿತ್ತು ಎಂದರು.

ಮೊದಲು ಈ ಯೋಜನೆ ಶಾಸಕರ ನೇತೃತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿತ್ತು, ಏಕೆಂದರೆ ಶಾಸಕರು ನಿತ್ಯವೂ ಜನರ ಜೊತೆಗೆ ಒಡನಾಟ ಇರುವುದರಿಂದ ಅವರಿಗೆ ಎಲ್ಲಿ ಸಮಸ್ಯೆಯಿದೆ, ಅದನ್ನು ಹೇಗೆ ಪರಿಹರಿಸಬೇಕು ಎನ್ನುವುದು ತಿಳಿದಿರುತ್ತದೆ, ಅವರು ಜನರಿಗೆ ಉತ್ತರದಾಯಿಗಳೂ ಹೌದು, ಆ ವ್ಯವಸ್ಥೆಯಿದ್ದಾಗ ಈ ಯೋಜನೆ ಅತ್ಯಂತ ಸಮರ್ಪಕವಾಗಿ ನಡೆಯುತ್ತಿತ್ತು, ಯಾವುದೇ ದೂರು ಇರಲಿಲ್ಲ, ಈಗ ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಸಕರ ನೇತೃತ್ವದ ಸಮಿತಿಯ ಹೊಣೆ ಕಿತ್ತು ಹಾಕಿ ಕ್ರಿಸ್ಟಿ ಎಂಬ ಸಂಸ್ಥೆಗೆ ಈ ಯೋಜನೆ ವಹಿಸಿಕೊಟ್ಟಿದೆ, ಅವರೇ ಎಲ್ಲ ವಸ್ತುಗಳನ್ನು ತರುತ್ತಾರೆ, ಅದನ್ನು ಎಂಎಸ್ಪಿಸಿಗೆ ಕೊಡುತ್ತಾರೆ, ಆ ಸಂಸ್ಥೆ ಕೇವಲ ಪೊಟ್ಟಣ ಕಟ್ಟಿಕೊಡುವ ಮಟ್ಟಕ್ಕೆ ಇಳಿದಿದೆ, ಇದು ತಿಂಗಳಿಗೆ ಒಂದು ತಾಲ್ಲೂಕಿಗೆ 30 ಲಕ್ಷ ರೂಪಾಯಿಗಳ ವಹಿವಾಟು ಇದೆ, ಈಗ ಏನು ಸಮಸ್ಯೆಯಾಗಿದೆಯೋ ತಿಳಿಯದು, ಅಂಗನವಾಡಿ ಮಕ್ಕಳಿಗೆ ಆಹಾರ ಪೂರೈಕೆ ಆಗುತ್ತಿಲ್ಲ, ನನ್ನ ಹತ್ತಿರ ಈ ಯೋಜನೆಯ ಅನುಷ್ಠಾನದ ಅಧಿಕಾರಿಗಳು ಬರೆದ ಪತ್ರದ ದಾಖಲೆಯಿದೆ, ಅದನ್ನು ಇಟ್ಟುಕೊಂಡೇ ನಾನು ಮಾತನಾಡುತ್ತಿರುವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಶಂಕರ್, ತಾಲ್ಲೂಕು ಬಿಜೆಪಿ ಘಟಕದ ಉಪಾಧ್ಯಕ್ಷ ರಾಜಶೇಖರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಿದ್ದೇಗೌಡ, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಭಾಕರ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!