ತುಮಕೂರು: ಹಾಲಿನ ದರ ಏರಿಕೆ ಲಾಭ ರೈತರಿಗೆ ಸಿಗಲಿದೆ ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಪೆಟ್ರೋಲ್ ಡೀಸೆಲ್ ಸೇರಿದಂತೆ ವಿವಿಧ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗಿವೆ, ಈ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಕೂಡ ಅನಿವಾರ್ಯವಾಗಿದ್ದು, ಅದರ ಲಾಭ ಪೂರ್ಣ ಪ್ರಮಾಣದಲ್ಲಿ ರೈತರಿಗೇ ಸಿಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವುದರಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಲಾಭವಾಗಲಿದ್ದು ರಾಜ್ಯ ಸರ್ಕಾರಕ್ಕೆ ಇದರಿಂದ ಯಾವುದೇ ಲಾಭವಿಲ್ಲ, ಆದರೆ ಈ ಏರಿಕೆಯಿಂದ ರಾಜ್ಯದ ಹಾಲು ಉತ್ಪಾದಕ ರೈತರಿಗೆ ಲಾಭವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಸದಸ್ಯ ಕಾಂತರಾಜು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಜಂಗಮಪ್ಪ, ವಕೀಲ ನಾರಾಯಣಗೌಡ ಉಪಸ್ಥಿತರಿದ್ದರು.
Comments are closed.