ಎಸ್ ಮಾಲ್ ಬಳಿ ಮೇಲ್ ಸೇತುವೆ ಓಪನ್

ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ: ಸಚಿವ ಪರಮೇಶ್ವರ

7

Get real time updates directly on you device, subscribe now.


ತುಮಕೂರು: ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಶನಿವಾರದಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದ ಎಸ್ ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿ, ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರ ಸೇತುವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು, ಕಿರಿದಾಗಿದ್ದ ಈ ಸೇತುವೆ ಅಗಲೀಕರಣಗೊಳಿಸಿ, ಹೊಸ ಸೇತುವೆ ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು, ರಾಜ್ಯದ 15 ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು, ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು, ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣ ಗೊಂಡಿರುವುದರಿಂದ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಮಾಜಿ ಸದಸ್ಯ ಹುಲಿ ನಾಯ್ಕರ್, ಮಾಜಿ ಸಚಿವ ರೇವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತಿ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ, ಅಧೀಕ್ಷಕ ಇಂಜಿನಿಯರ್ ಜಿ.ಸಿ.ಜಗದೀಶ್, ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್, ಸಹಾಯಕ ಇಂಜಿನಿಯರ್ ರಾಧಾಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!