ತುಮಕೂರು: ಶಿರಾ ಗೇಟ್-ಗುಬ್ಬಿ ಗೇಟ್ ವರೆಗೂ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವರ್ತುಲ ರಸ್ತೆ ಕಾಮಗಾರಿ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ತಾಲ್ಲೂಕಿನ ಕಸಬಾ ಉತ್ತರ ಹೋಬಳಿ ವ್ಯಾಪ್ತಿ ಅಮಾನಿಕೆರೆ ಗ್ರಾಮದ ಸರ್ವೇ ನಂಬರ್ 37/1, 37/2, 37/3ರಲ್ಲಿ ಒಟ್ಟು 0.33 ಗುಂಟೆ ಜಮೀನನ್ನು ಈ ವರ್ತುಲ ರಸ್ತೆ ಅಭಿವೃದ್ಧಿಗಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಸ್ವಾಧೀನ ಪಡಿಸಿಕೊಂಡ ಭೂ ಮಾಲೀಕರಿಗೆ ನಿಗದಿತ ಅವಧಿಯೊಳಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಸೀಲ್ದಾರ್ ರಾಜೇಶ್ವರಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Get real time updates directly on you device, subscribe now.
Prev Post
Next Post
Comments are closed.