ಗುಬ್ಬಿ: ಪೌಷ್ಟಿಕಾಂಶ ಭರಿತವಾದ ಆಹಾರದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಿಡಿಪಿಓ ಮಹೇಶ್ ತಿಳಿಸಿದರು.
ತಾಲೂಕಿನ ಕಡಬ ಗ್ರಾಮದಲ್ಲಿ ಪೋಶಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರ ಅಪೌಷ್ಟಿಕತೆ ತಡೆಯಬೇಕು ಎಂಬ ಉದ್ದೇಶದಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದು, ಅಂಗನವಾಡಿಯ ಮೂಲಕ ಅಪೌಷ್ಟಿಕತೆ ತಡೆದು ಪೌಷ್ಟಿಕ ಆಹಾರ ನೀಡುವ ಮೂಲಕ ಬಾಣಂತಿಯರಿಗೆ, ಗರ್ಭಿಣಿಯರಿಗೆ ಹಾಗೂ ಪುಟ್ಟ ಮಕ್ಕಳಿಗೆ ಉತ್ತಮ ಆರೋಗ್ಯ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಎಸಿಡಿಪಿಓ ಕೃಷ್ಣಮೂರ್ತಿ ಮಾತನಾಡಿ, ಈ ತಿಂಗಳು ಪೂರ್ಣವಾಗಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಅಂಗನವಾಡಿ ಕೇಂದ್ರಗಳಲ್ಲಿ ಮಾಡುವ ಮೂಲಕ ಗರ್ಭಿಣಿಯರಿಗೆ ಬಾಣಂತಿಯರಿಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ, ತಾವು ಇಲ್ಲಿ ಪಡೆದಿರುವ ಮಾಹಿತಿಯನ್ನು ಇನ್ನಿತರರಿಗೂ ತಿಳಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಭಾಗವಹಿಸಿದ್ದರು.
Comments are closed.