ಭಾರಿ ಮಳೆ ಸಾಧ್ಯತೆ- ಯಲ್ಲೋ ಅಲರ್ಟ್ ಘೋಷಣೆ

ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಡೀಸಿ ಸೂಚನೆ

1

Get real time updates directly on you device, subscribe now.


ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ ಮಾತನಾಡಿ, ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು, ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!