ತುಮಕೂರು: ಮನುಷ್ಯನು ಸದೃಢಗೊಂಡು ಆರೋಗ್ಯವಂತನಾಗಿ ಜೀವಿಸಲು ಕ್ರೀಡೆಗಳು ಸಹಕಾರಿಯಾಗಿದ್ದು, ಜಿಲ್ಲೆಯ ಯುವಕ, ಯುವತಿಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟು ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ದಸರಾ ಕ್ರೀಡಾಕೂಟದ ಅಂಗವಾಗಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿಂದು ಚಾಲನೆ ನೀಡಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದು ಕನ್ನಡದ ಜನಪ್ರಿಯ ಗಾದೆಯಾಗಿದೆ, ಮನುಷ್ಯನ ದೇಹ ಮತ್ತು ಮನಸ್ಸು ಆರೋಗ್ಯವಾಗಿರಲು ಕ್ರೀಡೆಗಳು ಪ್ರಯೋಜನಕಾರಿಯಾಗಿವೆ ಎಂದರು.
ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರು ಸ್ವತಃ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪಾಲ್ಗೊಂಡರು.
ಯುವ ಜನ ಕ್ರೀಡಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಜಿಲ್ಲಾ ಬ್ಯಾಡ್ಮಿಂಟನ್ ಕಾರ್ಯದರ್ಶಿ ಚಿದಾನಂದ್, ಟಿಡಿಬಿಬಿಎ ಕಾರ್ಯದರ್ಶಿ ದಿವಾಕರ್, ಕಬ್ಬಡಿ ಕೋಚ್ ಇಸ್ಮಾಯಿಲ್ ಮತ್ತಿತರರು ಇದ್ದರು.
Comments are closed.