ಸ್ವಚ್ಛತಾ ಸೇವಾ ಅಭಿಯಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

24

Get real time updates directly on you device, subscribe now.


ತುಮಕೂರು: ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ, ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯಗಳ ನಿರ್ದೇಶನದಂತೆ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಸ್ವಚ್ಛತೆಯಿಲ್ಲದ ಒಟ್ಟು 6047 ಸ್ಥಳಗಳನ್ನು ಗುರುತಿಸಿ, ಸ್ವಚ್ಛ ಮಾಡುವ ಮೂಲಕ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಸಹಕರಿಸಿದ ಎಲ್ಲಾರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಸ್ವಚ್ಛತೆ ಎಂಬುದು ಒಂದು ದಿನದ ಕೆಲಸವಲ್ಲ, ಪ್ರತಿನಿತ್ಯವೂ ಎಲ್ಲರೂ ಸ್ವಚ್ಛತಾ ಕೆಲಸದಲ್ಲಿ ತೊಡಗಿಕೊಳ್ಳಬೇಕು, ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾದರೆ ಸ್ವಚ್ಛತೆ ಪ್ರಮುಖ ಪಾತ್ರ ವಹಿಸುತ್ತದೆ, ಎಲ್ಲರೂ ಸ್ವಚ್ಛತೆಯ ಬಗ್ಗೆ ಗಮನಕೊಟ್ಟು ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಸ್ವಚ್ಛ ಕಾರ್ಮಿಕರಿಗೆ ಆರೋಗ್ಯ ಶಿಬಿರ
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 250ಕ್ಕೂ ಹೆಚ್ಚು ಆರೋಗ್ಯ ಶಿಬಿರ ಆಯೋಜಿಸಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ, ಪ್ರಸ್ತುತ ಹಮ್ಮಿಕೊಂಡಿರುವ ಆರೋಗ್ಯ ತುಮಕೂರು ಅಭಿಯಾನದಡಿಯಲ್ಲಿ ಜಿಲ್ಲೆಯ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಲ್ಯಾಣಿಗಳು, ಕೆರೆಗಳು, ಬಾವಿಗಳು ಸೇರಿದಂತೆ 1467 ಜಲಮೂಲಗಳನ್ನು ಅಭಿಯಾನದ ಭಾಗವಾಗಿ ಸ್ವಚ್ಛತೆ ಮಾಡಲಾಗಿದೆ.

ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ
ನಗರದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಹಾಗೂ ಉತ್ತಮ ರೀತಿಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಯಶಸ್ವಿಗೊಳಿಸಿದ 10 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸ್ಥಳೀಯ ಶಾಸಕರು ಈ ಪ್ರಶಸ್ತಿ ಪ್ರದಾನ ಮಾಡಿದರು.

Get real time updates directly on you device, subscribe now.

Comments are closed.

error: Content is protected !!