ನಾಯಿ ಕಡಿತಕ್ಕೆ ತಲ್ಲಣಿಸಿದ ಶಿರಾ ಜನತೆ

22

Get real time updates directly on you device, subscribe now.


ವಿಜಯ್ ಕುಮಾರ್
ಶಿರಾ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರ ಮೇಲೆ ನಾಯಿಯೊಂದು ದಾಳಿ ನಡೆಸಿ ಕಚ್ಚಿರುವ ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಗಾಂಧಿ ಜಯಂತಿಯಂದು ಬೆಳ್ಳಂಬೆಳಗ್ಗೆ ಜರುಗಿದೆ.
ಇಲ್ಲಿನ ಶ್ರೀರಾಘವೆಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಲು ಬಂದಿದ್ದ ಭಕ್ತರು, ರಸ್ತೆಯಲ್ಲಿ ಓಡಾಡುತ್ತಿದ್ದ ವಿದ್ಯಾರ್ಥಿಗಳು, ಪಾದಚಾರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿ ಹಲವು ಮಂದಿಗೆ ಕಚ್ಚಿ ಗಾಯಗೊಳಿಸಿದೆ, ನಗರಸಭೆ ಸದಸ್ಯ ಮಹೇಶ್ ಅವರ ಮಗಳು ದೀಕ್ಷಾ ದೇವಸ್ಥಾನಕ್ಕೆ ಬಂದಿದ್ದ ವೇಳೆ ಕಡಿತಕ್ಕೊಳಗಾಗಿದ್ದರೆ, ಗಾಂಧಿ ಜಯಂತಿ ಆಚರಣೆಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿ ಅಭಿಷೇಕ್, ಪಾದಚಾರಿ ಸೈಫ್ ಉಲ್ಲಾ ಮೊದಲಾದವರು ನಾಯಿಯ ಕಡಿತಕ್ಕೊಳಗಾಗಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ನಗರದ ಸರಸ್ವತಿ ಬಡಾವಣೆಯಲ್ಲಿಯೂ ಸಹಾ ನಾಯಿ ದಾಳಿ ನಡೆಸಿದ್ದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು, ಆಗಲೇ ನಗರಸಭೆ ವತಿಯಿಂದ ಸೂಕ್ತ ಕ್ರಮ ಕೈಗೊಂಡಿದ್ದರೆ ಇಂತಹ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಸಾರ್ವಜಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಾಯಿಗಳು ಹಿಂಡು ಹಿಂಡಾಗಿ ಸಂಚಾರ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ, ಜೊತೆಯಲ್ಲಿ ಆಗಾಗ್ಗೆ ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ವರದಿಯಾಗುತ್ತಿವೆ, ಇದರಿಂದ ಜನರು ಆತಂಕದಲ್ಲಿ ವಾಸ ಮಾಡುವ ಪರಿಸ್ಥಿತಿ ಬಂದೊದಗಿದೆ, ಬೀದಿ ನಾಯಿಗಳನ್ನು ಹಿಡಿದು, ಅವುಗಳಿಗೆ ಪ್ರತ್ಯೇಕ ನೆಲೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!