ಮಕ್ಕಳಿಗೆ ಮಹಾತ್ಮ ಗಾಂಧೀಜಿ ತತ್ವ ತಿಳಿಸಿ

ಎಲ್ಲರಲ್ಲೂ ಭಾವೈಕ್ಯತೆ ಮನೋಭಾವ ಬೆಳೆಸಿ: ಡಾ.ಪರಮೇಶ್ವರ್

23

Get real time updates directly on you device, subscribe now.


ತುಮಕೂರು: ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಏಕತೆ ಮತ್ತು ಶಾಂತಿಯುತ ಹೋರಾಟದ ತತ್ವಾದರ್ಶಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರಲ್ಲಿ ಭಾವೈಕ್ಯತೆ ಮನೋಭಾವ ಬೆಳೆಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಗಾಂಧೀಜಿ ಅವರು ಕೇವಲ ಭಾರತದ ಸ್ವತಂತ್ರ್ಯ ಹೋರಾಟಕ್ಕಷ್ಟೇ ಅಲ್ಲದೆ ಅನೇಕ ದೇಶಗಳ ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗಿಯಾಗಿದ್ದರು, ಅವರು ತಮ್ಮ ವೃತ್ತಿ ಜೀವನದಲ್ಲಿ ದಕ್ಷಿಣ ಆಫ್ರಿಕಾದ ವರ್ಣ ಭೇದ ನೀತಿಯ ವಿರುದ್ಧ ಹೋರಾಡಿದರು, ವಿಶ್ವದ ಅನೇಕ ರಾಷ್ಟ್ರ ನಾಯಕರು ಸಹ ಗಾಂಧೀಜಿಯವರ ತತ್ವಾದರ್ಶ ಪಾಲಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರೌಢಾಲಾ, ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದುಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ, ಖಾಯಮಾತಿ ಹೊಂದಿದ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ, ಪ್ರತಿಭಾವಂತ ಪೌರಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸೇವೆಯಿಂದ ನಿವೃತ್ತಿ ಹೊಂದಿದ ಪೌರ ಕಾರ್ಮಿಕರಿಗೆ ಸನ್ಮಾನ, ಉತ್ತಮ ಪೌರ ಕಾರ್ಮಿಕ ಪ್ರಶಸ್ತಿ ಸೇರಿದಂತೆ ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು.

ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!