ಬೇಡಿಕೆ ಈಡೇರಿಕೆ ಪಿಡಿಒಗಳ ಹೋರಾಟ

21

Get real time updates directly on you device, subscribe now.


ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಅ.4 ರಂದು ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳು ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಅ. 4 ರಂದು ಗ್ರಾಪಂ ಕಾರ್ಯ ಚಟುವಟಿಕೆ ಸ್ಥಗಿತಗೊಳ್ಳಲಿವೆ.

ಪಿಡಿಓಗಳ ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆ ಪಡೆಯಬೇಕು, 7 ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲ್ಲೂಕಿಗೆ ವರ್ಗಾವಣೆ ಮಾಡುವ ನಿಯಮ ಕೈಬಿಡಬೇಕು, ಪಿಡಿಓಗಳ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ ಆದೇಶಿಸಬೇಕು, ಕುಂದುಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ ನಡೆಯುತ್ತಿದ್ದು, ಮುಷ್ಕರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂಗಳ ಪಿಡಿಓಗಳು ಅ. 4 ರಂದು ಭಾಗವಹಿಸಲಿದ್ದಾರೆ ಎಂದು ಪಿಡಿಓಗಳ ಸಂಘದ ಜಿಲ್ಲಾಧ್ಯಕ್ಷ ಆರ್. ನಾಗರಾಜ್ ತಿಳಿಸಿದ್ದಾರೆ.
ತಾಪಂ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಪಿಡಿಓಗಳು ಈ ಸಂಬಂಧ ಮನವಿ ಸಲ್ಲಿಸಿ ಅನಿರ್ಧಿಷಾವಧಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದರು.

Get real time updates directly on you device, subscribe now.

Comments are closed.

error: Content is protected !!