ನಿಘಂಟು ಬ್ರಹ್ಮ ಜಿ.ವೆಂಕಟಸುಬ್ಬಯ್ಯ ಇನ್ನಿಲ್ಲ

425

Get real time updates directly on you device, subscribe now.

ತುಮಕೂರು: ಕನ್ನಡದ ನಿಘಂಟು ಎಂದೇ ಪ್ರಸಿದ್ಧಿ ಹೊಂದಿದ್ದ ನುಡಿ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ತಡರಾತ್ರಿ ನಿಧನ ಹೊಂದಿದರು.
ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಭಾನುವಾರ ತಡರಾತ್ರಿ 1.15ಕ್ಕೆ ಇಹಲೋಕ ತ್ಯಜಿಸಿದ್ದಾರೆ.
ಕಳೆದ ವಾರ ಮೂತ್ರನಾಳದ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಬಳಿಕ ಗುಣಮುಖರಾದರು ಆದರೆ, ತೀವ್ರ ಅಸ್ವಸ್ಥತೆಯಿಂದ ನಿಧನ ಹೊಂದಿದರು.

ಹುಟ್ಟಿ ಬೆಳೆದದ್ದು ಮೈಸೂರಿನಲ್ಲಿ, ಅಲ್ಲೇ ವಿದ್ಯಾಭ್ಯಾಸ ಪೂರೈಸಿ ನಂತರ 1940 ರಲ್ಲಿ ಬೆಂಗಳೂರಿಗೆ ಆಗಮಿಸಿದರು. ವಿಜಯ ಕಾಲೇಜಿನಲ್ಲಿ ನೌಕರಿ ಹೊಂದಿದ ಬಳಿಕ ಬೆಂಗಳೂರಿನಲ್ಲೇ ನೆಲೆಸಿದರು.
ಇಗೋ ಕನ್ನಡದ ಮೂಲಕ ಪದಗಳ ಹುಟ್ಟು-ಬೆಳವಣಿಗೆಗೆ ಸ್ವಾರಸ್ಯವನ್ನು ತಂದುಕೊಟ್ಟವರು. 2011 ರಲ್ಲಿ ಫೆಬ್ರವರಿ 4 ರಿಂದ 6 ರವರೆಗೆ ನಡೆದ 77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಸಂತಾಪ:
ಇವರ ನಿಧನಕ್ಕೆ ವಿದ್ಯಾವಾಚಸ್ಪತಿ ಕವಿತಾಕೃಷ್ಣ, ಸಾಹಿತಿ ಡಾ.ಎಂ.ಎನ್.ನಾಗರಾಜರಾವ್, ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಡಾ.ಬರಗೂರು ರಾಮಚಂದ್ರಪ್ಪ, ಸಾಹಿತಿ ದೊಡ್ಡರಂಗೇಗೌಡ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಇಂದು ಅಂತ್ಯಕ್ರಿಯೆ:
ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನೆರವೇರಲಿದ್ದು, ಜಯನಗರ 7ನೇ ಬ್ಲಾಕ್ ನ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Get real time updates directly on you device, subscribe now.

Comments are closed.

error: Content is protected !!