ಜಂಬೂ ಸವಾರಿಗೆ ಲಕ್ಷ್ಮಿ ಆನೆಗಳ ತಾಲೀಮು

19

Get real time updates directly on you device, subscribe now.


ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ಈ ಬಾರಿ ದಸರಾ ಸಂಭ್ರಮ ಮನೆ ಮಾಡಿದೆ, ಇದೇ ಮೊದಲ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಚಿತ್ತಾಕರ್ಷಕ ದಸರಾ ಉತ್ಸವ ಆಚರಿಸಲಾಗುತ್ತಿದ್ದು, ಅ. 12 ರಂದು ಅದ್ದೂರಿಯಾಗಿ ಜಂಬೂಸವಾರಿ ನಡೆಸುವ ಸಲುವಾಗಿ ನಗರದಲ್ಲಿ ಎರಡು ಲಕ್ಷ್ಮಿ ಆನೆಗಳ ತಾಲೀಮು ನಡೆಸಲಾಯಿತು.

ತುಮಕೂರು ದಸರಾ ಉತ್ಸವಕ್ಕೆ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮಿ ಹಾಗೂ ತಿಪಟೂರು ತಾಲ್ಲೂಕು ಕಾಡು ಸಿದ್ದೇಶ್ವರ ಮಠದ ಲಕ್ಷ್ಮಿ ಆನೆಗಳನ್ನು ತೊಡಗಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಜಂಬೂಸವಾರಿ ಮೆರವಣಿಗೆಯ ತಾಲೀಮು ನಡೆಸಲಾಯಿತು.
ಡಿಎಫ್ ಐ ಹೆಚ್.ಅನುಪಮಾ ನೇತೃತ್ವದಲ್ಲಿ ಜಂಬೂಸವಾರಿ ನಡೆಯಲಿರುವ ಮಾರ್ಗದಲ್ಲಿ ಎರಡು ಲಕ್ಷ್ಮಿ ಆನೆಗಳ ತಾಲೀಮು ನಡೆಸಿದ್ದು, ರಸ್ತೆಯಲ್ಲಿ ಯಾವುದೇ ಗಲಾಟೆ ಇಲ್ಲದೆ ಎರಡು ಆನೆಗಳು ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು.

ಈ ಸಂದರ್ಭದಲ್ಲಿ ಮಾತನಾಡಿದ ಡಿಎಫ್ ಐ ಹೆಚ್.ಅನುಮಪ, ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮಿ ಆನೆ 6300 ಕೆಜಿ ಇದ್ದು, ಈ ಆನೆ ಅಂಬಾರಿ ಹೊರಲಿದೆ, ತಿಪಟೂರು ಕಾಡುಸಿದ್ದೇಶ್ವರ ಮಠದ ಲಕ್ಷ್ಮಿ ಆನೆ 3400 ಕೆಜಿ ಇದ್ದು, ಈ ಆನೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿದೆ, ಈ ಎರಡು ಆನೆಗಳು ಯಾವುದೇ ಗಲಾಟೆ ಇಲ್ಲದೆ ರಸ್ತೆಯಲ್ಲಿ ಜನಸಂದಣಿ ಮಧ್ಯೆ ಹೆಜ್ಜೆ ಹಾಕಿವೆ ಎಂದರು.

ಪಶು ವೈದ್ಯ ಡಾ.ಶ್ರೀಧರ್ ಮಾತನಾಡಿ, ತುಮಕೂರು ದಸರಾ ಜಂಬೂಸವಾರಿಗೆ ಎರಡು ಆನೆಗಳನ್ನು ಬಳಸಿಕೊಳ್ಳುತ್ತಿದ್ದು, ಈ ಎರಡು ಆನೆಗಳ ಆರೋಗ್ಯವಾಗಿವೆ, ಯಾವುದೇ ರೀತಿಯ ತೊಂದರೆಯಿಲ್ಲ, ಈ ಆನೆಗಳು ಮೊದಲಿನಿಂದಲೂ ಮಠಗಳಲ್ಲಿ ಹಾಗೂ ಜನರೊಂದಿಗೆ ಬೆರೆತಿರುವುದರಿಂದ ತಾಲೀಮು ಸಲೀಸಾಗಿ ನಡೆದಿದೆ ಎಂದರು.
ತಾಲೀಮು ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!