ರೈಲು ನಿಲ್ದಾಣಕ್ಕೆ ಡಾ.ಶಿವಕುಮಾರ ಶ್ರೀ ಹೆಸರಿಡಿ

ಪ್ರಧಾನ ಮಂತ್ರಿ ಮೋದಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಮನವಿ

18

Get real time updates directly on you device, subscribe now.


ತುಮಕೂರು: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರು ನವ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಅವರನ್ನು ಭೇಟಿ ಮಾಡಿ ರಾಜ್ಯದ ಸರ್ವಾಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದಾರೆ.
ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನ ಮಂತ್ರಿಗಳಿಗೆ ಸಲ್ಲಿಸಿದ ಅವರು ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವಾಲಯದಿಂದ 87 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಇಲಾಖೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಅಭಿನಂದನೆ ಸಲ್ಲಿಸಿ, ತುಮಕೂರು, ರಾಯದುರ್ಗ ಮತ್ತು ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು- ರಾಯದುರ್ಗ ರೈಲ್ವೇ ಮಾರ್ಗಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ 3 ತಿಂಗಳಲ್ಲಿ ಶೇ.90 ರಷ್ಟು ಪೂರ್ಣಗೊಳಿಸಿರುವ ಬಗ್ಗೆ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಿರುವ ಕುರಿತು ಹಾಗೂ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಗೆ ಜಿಲ್ಲಾಡಳಿತ ಮತ್ತು ರೈಲ್ವೆ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!