ಶಾರದಾ ದೇವಿ ದರ್ಶನ ಪಡೆದ ಪರಮೇಶ್ವರ ದಂಪತಿ

2

Get real time updates directly on you device, subscribe now.


ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ ದಂಪತಿ ಬುಧವಾರ ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಕಾಳರಾತ್ರಿ (ಶಾರದಾ) ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ದಸರಾ ಅಂಗವಾಗಿ ಅಕ್ಟೋಬರ್ 11 ಹಾಗೂ 12 ರಂದು ನಡೆಯಲಿರುವ ವೈವಿಧ್ಯಮಯ ಕಾರ್ಯಕ್ರಮಗಳ ಅಮರ ಶಿಲ್ಪ ಜಕಣಾಚಾರಿ ಪ್ರಮುಖ ವೇದಿಕೆ, ಹೆಲಿಕಾಪ್ಟರ್ ಘಟಕದವರು ನಿರ್ಮಿಸಿರುವ ಹೆಲಿಕಾಪ್ಟರ್ ಮಾದರಿ, ಹೆಚ್.ಎಂ.ಗಂಗಾಧರಯ್ಯ ಮುಖ್ಯದ್ವಾರ ನಿರ್ಮಾಣ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾರ್ಯಕ್ರಮ ವೀಕ್ಷಿಸಲು ಬರುವ ಕಲಾಸಕ್ತರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಆಸನ ವ್ಯವಸ್ಥೆ ಮಾಡಬೇಕು, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ, ಭದ್ರತಾ ವ್ಯವಸ್ಥೆ, ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ನಿರ್ಮಿತಿ ಕೇಂದ್ರದ ರಾಜಶೇಖರ್, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ನಾಗಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!