ಕೌಶಲ್ಯ ಶಿಕ್ಷಣದಲ್ಲಿ 17 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ

5

Get real time updates directly on you device, subscribe now.


ತುಮಕೂರು: ಕೌಶಲ್ಯ ಪಥ ಸಂಸ್ಥೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬಹು ಕೌಶಲ್ಯಯುವ ಸಬಲೀಕರಣ ಕಾರ್ಯಾಗಾರದಲ್ಲಿ ಉತ್ತಮ ಪ್ರದರ್ಶನ ತೋರಿ ಆಯ್ಕೆಯಾದ ಅತ್ಯುತ್ತಮ 17 ವಿದ್ಯಾರ್ಥಿಗಳಿಗೆ ತುಮಕೂರು ವಿಶ್ವ ವಿದ್ಯಾಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಪ್ರಮಾಣಪತ್ರ ವಿತರಿಸಿದರು.

ತಿಪಟೂರು, ಪಾವಗಡ, ಕೊರಟಗೆರೆ, ಗುಬ್ಬಿ, ಚಿಕ್ಕನಾಯಕನ ಹಳ್ಳಿ ಹಾಗೂ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಬಹು ಕೌಶಲ್ಯ ಯುವ ಸಬಲೀಕರಣ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೃದು ಕೌಶಲ್ಯ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಕುರಿತು ಹೆಸರಾಂತ ಸಂಸ್ಥೆಗಳ ಪ್ರತಿನಿಧಿಗಳು, ಕಾಲೇಜುಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಕೈಗಾರಿಕಾ ಸಂಸ್ಥೆಗಳ ವಿಷಯ ತಜ್ಞರಿಂದ 45 ದಿನಗಳ ಕಾಲ ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಭವಿಷ್ಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲೆಂದು ಪ್ರಮಾಣ ಪತ್ರ ವಿತರಿಸಲಾಯಿತು, ಕೌಶಲ್ಯ ಶಿಕ್ಷಣದಲ್ಲಿ ಉತ್ತಮ ಕಾಲೇಜು ಎಂದು ಪರಿಗಣಿಸಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಗದು ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ವಿಷಯ ಪರಿಣಿತಿಯೊಂದಿಗೆ ಸಂವಹನ ಕಲೆಯೊಂದಿದ್ದರೆ ಉದ್ಯೋಗ ಪಡೆಯಬಹುದು, ಮಾದಕ ವಸ್ತುಗಳಷ್ಟೇ ವ್ಯಸನಕಾರಿಯಾದ ರೀಲ್ಸ್ ಪ್ರಪಂಚದಿಂದ ಹೊರ ಬಂದು ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶ್ರಮಿಸಬೇಕು ಎಂದು ಹೇಳಿದರು.
ಕೌಶಲ್ಯ ಪಥ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಕುಮಾರ್, ತಾಂತ್ರಿಕ ಸಹಾಯಕಿ ನೂರ್ ಆಯೇಷಾ, ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಪ್ಪ, ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಮತ್ತು ಅಕಾಡೆಮಿಯ ನಿಸ್ಸಾರ್ ಅಹಮದ್ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!