ಅ.18ರಂದು ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ

1

Get real time updates directly on you device, subscribe now.


ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನ ಜಿಲ್ಲೆಗೆ ಭೇಟಿ ನೀಡಲಿದ್ದು, ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18 ರಂದು ಬೆಳಗ್ಗೆ 10 ರಿಂದ ಮ.1.30 ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ, ದೂರು ಅರ್ಜಿ ಸ್ವೀಕರಿಸಲಿದ್ದಾರೆ, ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ.ಲಕ್ಷ್ಮೀನಾರಾಯಣ ತಿಳಿಸಿದರು.
ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತಕ್ಕೆ 182ಕ್ಕೂ ಹೆಚ್ಚು ದೂರು ಅರ್ಜಿ ಸಲ್ಲಿಕೆಯಾಗಿವೆ, ಜಿಲ್ಲೆಯ ಯಾವುದೇ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಕಾನೂನು ಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ವಿನಾಕಾರಣ ವಿಳಂಬ ಮಾಡುತ್ತಿರುವ, ಕೆಲಸ ಮಾಡದೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಈ ಸಭೆಗೆ ಆಗಮಿಸಿ ಲಿಖಿತ ರೂಪದಲ್ಲಿ ನೀಡಬಹುದಾಗಿದೆ, ಸಭೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸ್ಥಳದಲ್ಲಿಯೇ ಸಮಸ್ಯೆ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದಲ್ಲದೆ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಜಿ.ರಾಮಕೃಷ್ಣಪ್ಪ ಹಾಗೂ ಬಿ.ಉಮಾ ಶಂಕರ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಡಿ.ಮೊಹಮ್ಮದ್ ಸಲೀಮ್, ಶಿವ ರುದ್ರಪ್ಪ ಮೇಟಿ ಇದ್ದರು.

Get real time updates directly on you device, subscribe now.

Comments are closed.

error: Content is protected !!