ತುಮಕೂರು: ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವ ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ಇದಕ್ಕೂ ಮುನ್ನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಮಹಾಗೌರಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ತಮ್ಮ ಧರ್ಮಪತ್ನಿ ಶೈಲಜ ಸೋಮಣ್ಣ ಅವರೊಂದಿಗೆ ಪೂಜೆ ಸಲ್ಲಿಸಿದರು.
ವಿ.ಸೋಮಣ್ಣ ದಂಪತಿ ಅಷ್ಟಮಿ ಪ್ರಯುಕ್ತ ಜರುಗಿದ ಶ್ರೀದುರ್ಗಾ ಹೋಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿ, ಸಂಸ್ಕೃತಿ ಮತ್ತು ಸಂಪ್ರದಾಯ ನಮ್ಮ ಪೂರ್ವಿಕರು ನಮಗೆ ನೀಡಿದ ಉತ್ತಮ ಸಂದೇಶಗಳಾಗಿದ್ದು ಅವುಗಳನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಯಾವುದೇ ಭೇದ ಭಾವಗಳಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ತುಮಕೂರಿನಲ್ಲಿ ದಸರಾ ಉತ್ಸವ ಆಚರಣೆ ಮಾಡುತ್ತಿರುವುದು ಹರ್ಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ತಹಸೀಲ್ದಾರ್ ಸವಿತಾ, ಅರ್ಚಕರ ಸಂಘದ ಜಿಲ್ಲಾಧ್ಯಕ್ಷ ರಾಮತೀರ್ಥನ್ ಮತ್ತಿತರರು ಹಾಜರಿದ್ದರು.
Comments are closed.