ತುಮಕೂರು: ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚಿಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತ ಬಲ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲೆಯು ಆಧಾರ್ ಸೀಡಿಂಗ್ ನಲ್ಲಿ ಶೇಕಡಾ 85.9 ಗುರಿ ಸಾಧಿಸಿದ್ದು, ಬಾಕಿ ಇರುವ ಆಧಾರ್ ಸೀಡಿಂಗ್ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಬಗರ್ ಹುಕುಂ ಸಂಬಂಧಿಸಿದಂತೆ 496, ಸಕಾಲಕ್ಕೆ ಸಂಬಂಧಿಸಿದಂತೆ 281, ಪಿಂಚಣಿ 1284, ಆರ್ ಟಿ ಸಿ ತಿದ್ದುಪಡಿ 2932 ಅರ್ಜಿಗಳು ಬಾಕಿ ಇದ್ದು ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುಣಾವಣೆ ತಹಶೀಲ್ದಾರ್ ರೇಷ್ಮಾ, ತಹಶೀಲ್ದಾರ್ ರಾಜೇಶ್ವರಿ, ವರದರಾಜು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
Comments are closed.