ತುಮಕೂರು ಜಿಲ್ಲೆಯಲ್ಲಿ ವರುಣನ ಅಬ್ಬರ

ರಸ್ತೆ, ಗುಂಡಿಗಳಲ್ಲಿ ಮಳೆ ನೀರು- ಶಾಲಾ, ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳ ಪರದಾಟ

27

Get real time updates directly on you device, subscribe now.


ತುಮಕೂರು: ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಪ್ರಯಾಸ ಪಡುವಂತಾಗಿದೆ.
ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸೋನೆ ಮಳೆ ಹಾಗೂ ಒಮ್ಮೆಮ್ಮೆ ಜೋರು ಮಳೆ ಆಗುತ್ತಿರುವುದರಿಂದ ಜನತೆ ಹೊರಗೆ ತೆರಳಲು ಸಾಧ್ಯವಾಗದೆ ಹೈರಾಣಾಗಿದ್ದಾರೆ.
ಈಗಾಗಲೇ ಮಹಾಲಯ ಅಮಾವಾಸ್ಯೆಯಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭೂಮಿ ತಂಪಾಗಿದ್ದು, ಕೊಂಚ ಮಳೆಯಾದರೂ ಸಹ ನೀರು ಹರಿಯುತ್ತಿದೆ, ಹೊಲಗಳು, ತೋಟಗಳಲ್ಲಿ ನೀರು ನಿಂತು ಜಲಾವೃತಗೊಳ್ಳುತ್ತಿವೆ, ಪರಿಸ್ಥಿತಿ ಹೀಗಿರುವಾಗ ಇನ್ನು 5 ದಿನ ನಿರಂತರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ, ನಿರಂತರ ಮಳೆಯಾದರೆ ರಾಗಿ ಬೆಳೆ ಹಾಗೂ ತೋಟಗಳು ನೀರು ತುಂಬಿಕೊಂಡು ಬೆಳೆ ಹಾಳಾಗುವ ಆತಂಕ ರೈತರನ್ನು ಕಾಡುತ್ತಿದೆ.
ಮೋಡ ಕವಿದ ವಾತಾವರಣ ಮುಂದುವರೆದಿದೆ, ಇನ್ನು 5 ದಿನ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಜಿಲ್ಲೆಯಲ್ಲಿ ವರುಣ ಆರ್ಭಟಿಸುತ್ತಿರುವುದರಿಂದ ಈಗಾಗಲೇ ಜಿಲ್ಲಾಡಳಿತ ಆರೆಂಜ್, ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Get real time updates directly on you device, subscribe now.

Comments are closed.

error: Content is protected !!