ಅದ್ದೂರಿ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ

ಕನ್ನಡ ರಾಜ್ಯೋತ್ಸವ ದಸರಾ ಮಾದರಿಯಲ್ಲಿ ಇರಲಿ: ಡೀಸಿ

3

Get real time updates directly on you device, subscribe now.


ತುಮಕೂರು: ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಮಕೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ಆಚರಿಸಲಾದ ದಸರಾ ಉತ್ಸವದ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲ ಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!