ಹಳ್ಳಿಗಳಲ್ಲಿ ಕಾನೂನು ಅರಿವು ಮೂಡಿಸಿ

ವಕೀಲರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸಲಹೆ

3

Get real time updates directly on you device, subscribe now.


ತುಮಕೂರು: ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.
ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿ, ಕಪ್ಪು ಕೋಟು ಹಾಕಿಕೊಂಡವರ ಮೇಲೆ ಸಮಾಜದಲ್ಲಿ ಭಯ ಮತ್ತು ಗೌರವ ಎರಡೂ ಇರುತ್ತದೆ, ಕೋಟು ಹಾಕಿಕೊಂಡ ಮೇಲೆ ನ್ಯಾಯಾಲಯದಲ್ಲಿ ವಾದ ಮಾಡಿದಂತೆಯೇ ಸಾರ್ವಜನಿಕ ಜೀವನಕ್ಕೂ ನಾವು ತೆರೆದುಕೊಳ್ಳಬೇಕು, ವಕೀಲರು ತಂಡ ಮಾಡಿಕೊಂಡು ಹಳ್ಳಿಗಳಿಗೆ ತೆರಳಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜಯ್ಯ ಮಾತನಾಡಿ, ನ್ಯಾಯಾಲಯಕ್ಕೆ ಹೆಚ್ಚಿನ ಜಾಗದ ಅವಶ್ಯಕತೆ ಇದೆ, ಯಲ್ಲಾಪುರದ ಬಳಿ ಕೇಂದ್ರೀಯ ವಿದ್ಯಾಲಯದ ಸಮೀಪ 35 ಎಕರೆ ಜಾಗ ಇದೆ, ಇದರಲ್ಲಿ 25 ಎಕರೆ ಜಾಗವನ್ನು ನ್ಯಾಯಾಲಯಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ, ಅಲ್ಲದೆ ತುಮಕೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ಖಾಲಿಯಾಗುತ್ತಿರುವುದರಿಂದ ಆ ಜಾಗ ಬಿಟ್ಟು ಕೊಟ್ಟರೆ ನ್ಯಾಯಾಲಯ ಸಂಕೀರ್ಣಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆಗೆ ನೀವು ಪದೇ ಪದೇ ಭೇಟಿ ನೀಡಿದರೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂದು ಉಪಲೋಕಾಯುಕ್ತರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಯಂತಕುಮಾರ್, ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕರಾದ ಜೆ.ವಿ.ವಿಜಯಾನಂದ, ಅರವಿಂದ ಎನ್.ವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ವಕೀಲರಾದ ಎಸ್.ರಮೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!