ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು- ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ
ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ- ಜಾನುವಾರುಗಳ ಜೀವ ಹಾನಿಯಾಗದಂತೆ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿ ಇದ್ದುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೆರೆ- ಕಟ್ಟೆಗಳ ಏರಿ, ಬಂಡ್, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816- 2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
Comments are closed.