ಸುಳ್ಳು ದಾಖಲೆ ಸೃಷ್ಟಿಗೆ ಆಕ್ರೋಶ

ಉಪ ಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

1

Get real time updates directly on you device, subscribe now.


ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್.ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪ್ರಕರಣಗಳ ತನಿಖೆ ಮತ್ತು ವಿಲೇವಾರಿ ಸಭೆಯಲ್ಲಿ ಈ ಪ್ರಸಂಗ ಜರುಗಿತು, ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಪಿಡಿಓ ವಿನಾಯಕ ಅವರಿಗೆ ಎಚ್ಚರಿಕೆ ನೀಡಿದ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸಾರ್ವಜನಿಕ ಸೇವೆಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸುವುದು ಅಪರಾಧ, ಇಂತಹ ಅಪರಾಧಗಳನ್ನು ಲೋಕಾಯುಕ್ತ ಸಹಿಸುವುದಿಲ್ಲ, ಸಾರ್ವಜನಿಕರನ್ನು ವಂಚಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಸಭೆಯಲ್ಲಿ ಲೋಕಾಯುಕ್ತದ ವಿವಿಧ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!