ತುಮಕೂರು: ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು, ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.
ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ, ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ ಮನೆಗಳು, ಗುಡಿಸಲುಗಳು ನೆಲಕಚ್ಚಿವೆ, ಜನ ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ, ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ, ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಳೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ರೈತ ಸಂಘದ ಆಗ್ರಹವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ, ಜಿಲ್ಲೆಯ ಮುಖಂಡರಾದ ಕಾಳೇಗೌಡ, ಬಸವರಾಜು, ಶಿವಕುಮಾರ್, ಜಗದೀಶ್, ವೆಂಕಟೇಗೌಡ, ಲಕ್ಷ್ಮಣಗೌಡ, ನಾಗರತ್ನಮ್ಮ, ಚಿಕ್ಕಬೋರೇಗೌಡ, ರಹಮತ್ ಸಾಬ್, ಭಾಗ್ಯಮ್ಮ, ಲೋಕೇಶ್, ರವೀಶ್, ಚನ್ನಬಸಣ್ಣ, ಅರೇಹಳ್ಳಿ ಮಂಜುನಾಥ್, ಶಬ್ಬೀರ ಕೊರಟಗೆರೆ, ಕೆಂಚಪ್ಪ, ಚಿರತೆ ಚಿಕ್ಕಣ್ಣ, ತಿಮ್ಮೇಗೌಡ, ಮಹೇಶ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.
Comments are closed.