ನಾಲ್ಕು ಶೇಂಗಾ ಖರೀದಿ ಕೇಂದ್ರ ಸ್ಥಾಪನೆ: ಡೀಸಿ

3

Get real time updates directly on you device, subscribe now.


ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲ್ಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಶೇಂಗಾ ಬೆಳೆ ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು, ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು, ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಾಫೆಡ್ ಮತ್ತು ರಾಜ್ಯ ಸರ್ಕಾರದ ಕೆಓಎಫ್ ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ, ಎಫ್ ಎಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್ ನಂತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜ ಖರೀದಿಸಬೇಕು, ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ, ರೈತರಿಂದ ಶೇಂಗಾ ಖರೀದಿಸುವ ಪೂರ್ವದಲ್ಲಿ ಫ್ರೂಟ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಾಯಿಸಿದ ನಂತರ 90 ದಿನಗಳವರೆಗೆ ಖರೀದಿ ಮಾಡಬೇಕು, ರೈತರ ನೋಂದಣಿಗೆ 45 ದಿನಗಳ ಕಾಲಾವಕಾಶವಿದ್ದು, ಯಾವುದೇ ಗದ್ದಲ- ಗಲಭೆಗಳಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಗೆ ಸೂಚನೆ ನೀಡಿದರು.

ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು, ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸುಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ಡಾ.ಬಿ.ರಾಜಣ್ಣ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!