ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿಯನ್ನು ಬಲಿಪಾಢ್ಯಮಿಯಂದು 18 ಕೋಮಿನ ಜನರು ಸೇರಿ ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊಂದಿಗೆ ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದ್ದು, ಇನ್ನು ಒಂದು ತಿಂಗಳ ಕಾಲ ಭಕ್ತರಿಗೆ ಇತಿಹಾಸ ಪ್ರಸಿದ್ದ ಗಣೇಶ ಮೂರ್ತಿಯ ದರ್ಶನ ಭಾಗ್ಯ ದೊರೆಯಲಿದೆ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ಗೂಳೂರು ಮಹಾ ಗಣಪತಿಯನ್ನು ಕಾರ್ತಿಕ ಮಾಸದಲ್ಲಿ 1 ತಿಂಗಳ ಕಾಲ ಪ್ರತಿಷ್ಠಾಪಿಸಿ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯದೊಂದಿಗೆ ಭಕ್ತರ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಬಲಿಪಾಡ್ಯಮಿ ದಿನದಂದು ಗಣೇಶಮೂರ್ತಿಗೆ ವಿಶೇಷ ಪೂಜೆಯೊಂದಿಗೆ ಕಣ್ಣುಧಾರಣೆ ಮಾಡಲಾಯಿತು, ನಂತರ ಗಣೇಶಮೂರ್ತಿಯ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು, ಇನ್ನು ಒಂದು ತಿಂಗಳ ಕಾಲ ಪ್ರತಿನಿತ್ಯ ಪೂಜೆ ಪುನಸ್ಕಾರ ನೆರವೇರಲಿದೆ.
ಈ ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, 1 ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು.
ಒಂದು ತಿಂಗಳ ಕಾಲ ಗಣೇಶ ಮೂರ್ತಿಯ ದರ್ಶನೋತ್ಸವಕ್ಕೆ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಬರುತ್ತಾರೆ ಎಂದು ತಿಳಿಸಿದರು.
Comments are closed.