ಓಬವ್ವ ಶೌರ್ಯ, ದೇಶ ಭಕ್ತಿಯ ಪ್ರತೀಕ

ಅಂಬೇಡ್ಕರ್ ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ

8

Get real time updates directly on you device, subscribe now.


ತುಮಕೂರು: ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆ ಬೋಧಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎಸ್.ಚಿನ್ನಸ್ವಾಮಿ ಸೋಸಲೆ ತಿಳಿಸಿದ್ದಾರೆ.

ನಗರದ ಡಾ.ಗುಬ್ಬಿವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ, ಕರ್ನಾಟಕ ಜನ ಸಂಸ್ಕೃತಿಯಲ್ಲಿ ಸಮಾನ ಭಾವ ಮೂಡಿಸಿ ವಾಸ್ತವತೆ ಸಾರಿದ ಶರಣ ಸಾಹಿತ್ಯದ ರೂವಾರಿ ಬಸವಣ್ಣ ಅವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ, ಅಂತೆಯೇ ದೇಶದಾದ್ಯಂತ ತಳ ಸಮುದಾಯಗಳನ್ನು ಸಮತೆಯೆಡೆಗೆ ಸಾಗಲು ಬೆಳಕು ತೋರಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಶ್ಯಕತೆಯಿದೆ ಎಂದರು.

ಇತಿಹಾಸದಲ್ಲಿ ತಳ ಸಮುದಾಯದ ಓಬವ್ವ ಒಬ್ಬ ಕಾವಲುಗಾರನ ಪತ್ನಿಯಾಗಿ ಸ್ವಾಮಿ ನಿಷ್ಠೆಗಾಗಿ ಹಾಗೂ ತಮ್ಮ ರಾಜ್ಯದ ಉಳಿವಿಗಾಗಿ ಒನಕೆಯಿಂದ ಶತ್ರುಗಳನ್ನು ಸದೆ ಬಡಿದು ವೀರವನಿತೆಯಾದಳು, ಈ ಮೂಲಕ ಛಲವಾದಿ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಛಲವಾದಿ ಎಂಬ ಪದಕ್ಕೆ ಅರ್ಥ ತುಂಬಿ ನಿರೂಪಿಸಿದರು, ಅಂತೆಯೇ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಕೂಡ ಯಾವುದೇ ಫಲಾಪೇಕ್ಷೆಯಿಲ್ಲದೆ ಸಂವಿಧಾನ ಮೂಲಕ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿ ತಳ ಸಮುದಾಯದಲ್ಲಿ ಧೈರ್ಯ ತುಂಬಿದ್ದಾರೆ ಎಂದರು.

ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಟಿ.ಲಕ್ಷ್ಮೀನರಸಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಪ್ಪೇಸ್ವಾಮಿ.ಎಂ.ಎನ್, ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ.ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಲಕ್ಷ್ಮಣದಾಸ್, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಸಿ.ಭಾನುಪ್ರಕಾಶ್, ದಲಿತ ಛಲವಾದಿ ಮಹಾಸಭಾ ಅಧ್ಯಕ್ಷ ಡಾ.ಪಿ.ಚಂದ್ರಪ್ಪ, ತುಮಕೂರು ಹಾಲು ಒಕ್ಕೂಟ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸನ್, ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗ ಅಧ್ಯಕ್ಷೆ ಎಂ.ಆರ್. ವಿಜಯಲಕ್ಷ್ಮಿ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!