ಪಿಡಿಓ ಶಿವಕುಮಾರ್ ಅಮಾನತು

13

Get real time updates directly on you device, subscribe now.


ತುಮಕೂರು: ಗುಬ್ಬಿ ತಾಲ್ಲೂಕು ಹಾಗಲವಾಡಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್.ಎಸ್.ಹೆಚ್. ಅವರು ಹಾಗಲವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಜಲ್ಲಿ ರಸ್ತೆ ಕಾಮಗಾರಿ, ಅಮೃತ ಸರೋವರ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಮತ್ತಿತರ ಕಾಮಗಾರಿ ಅನುಷ್ಠಾನಗೊಳಿಸದೆ ನಿಯಮ ಬಾಹಿರವಾಗಿ ಕಾಮಗಾರಿಯ ಕೂಲಿ ಮೊತ್ತ ಪಾವತಿಸಿ ಸರ್ಕಾರಿ ಅನುದಾನ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕೆಸಿಎಸ್ ಆರ್ ನಿಯಮದನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಆದೇಶಿಸಿದ್ದಾರೆ.
ನರೇಗಾ ಯೋಜನೆಯಡಿ ನಿಯಮ ಬಾಹಿರವಾಗಿ ಮಾರ್ಗಸೂಚಿ ಉಲ್ಲಂಸಿ ಸರ್ಕಾರಿ ಅನುದಾನ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಗುಬ್ಬಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಗತ್ಯ ದಾಖಲೆಗಳೊಂದಿಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಆರೋಪಗಳ ಪಟ್ಟಿ ಪರಿಶೀಲಿಸಲಾಗಿ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಈ ಅಮಾನತು ಆದೇಶ ಹೊರಡಿಸಲಾಗಿದೆ.

Get real time updates directly on you device, subscribe now.

Comments are closed.

error: Content is protected !!