ತುಮಕೂರು: ಜಿಲ್ಲೆಯ ರೈತರಿಗಾಗಿ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಯೋಜನೆ ಮತ್ತು ಸವಲತ್ತುಗಳ ಬಗ್ಗೆ ವ್ಯಾಪಕ ಪ್ರಚಾರ ಕಾರ್ಯ ಕೈಗೊಂಡು, ಕಟ್ಟ ಕಡೆಯ ರೈತನಿಗೂ ಯೋಜನೆಗಳ ಸದುಪಯೋಗ ಆಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಜಿಲ್ಲೆಯ ಯಾವುದೇ ಅರ್ಹ ರೈತರು ಸರ್ಕಾರದ ಯೋಜನೆಗಳಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಪ್ರಸ್ತುತ ವರ್ಷದಲ್ಲಿ ವಿವಿಧ ಯೋಜಗಳಡಿ 60 ಸಾವಿರ ಫಲಾನುಭವಿಗಳ ಆಯ್ಕೆಗೆ ಗುರಿ ನೀಡಲಾಗಿದ್ದು, ಶೀಘ್ರವಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ, ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ ಕಂಚಿಬೈಲ್, ಕೃಷಿ ಉಪ ನಿರ್ದೇಶಕ ಹುಲಿರಾಜು ಹಾಗೂ ಹೆಚ್.ಸಿ.ಚಂದ್ರಕುಮಾರ್ ಸೇರಿದಂತೆ ವಿವಿಧ ತಾಲ್ಲೂಕುಗಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಹಾಜರಿದ್ದರು.
Comments are closed.