ತುರುವೇಕೆರೆ: ತಾಲೂಕಿನಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ತಾಲೂಕು ಆಡಳಿತ ಗಾಂಜಾ ಸೇವನೆ ಮತ್ತು ಗಾಂಜಾ ಸೊಪ್ಪು ಸಂಗ್ರಹಿಸಿಕೊಟ್ಟುಕೊಂಡಿದ್ದ ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.
ಗಾಂಜಾ ಸಂಗ್ರಹಿಸಿಟ್ಟುಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಗುರುವಾರ ಬಂಧಿಸಿದ್ದಾರೆ, ಇಲ್ಲಿನ ದೇವೇಗೌಡ ಬಡಾವಣೆಯ ದರ್ಶನ್ (20) ಮತ್ತು ತಿಲಕ್ (21) ಬಂಧಿತ ಆರೋಪಿಗಳಾಗಿದ್ದಾರೆ, ತಿಲಕ್ ಪಟ್ಟಣದಲ್ಲಿ ಗಾರೆ ಕೆಲಸ ಮಾಡುತ್ತಿದ್ದರೆ, ದರ್ಶನ್ ದೇವೇಗೌಡ ಬಡಾವಣೆಯಲ್ಲಿ ಬೂಸ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಇಬ್ಬರು ಆರೋಪಿಗಳು ದೇವೇಗೌಡ ಬಡಾವಣೆಗೆ ಹೊಂದಿಕೊಂಡಂತಿರುವ ತೋಟದ ಬಳಿಯ ಆಲದ ಮರದಡಿ ಗಾಂಜಾ ಸಂಗ್ರಹಿಸಿಟ್ಟುಕೊಂಡಿದ್ದಾರೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಇಬ್ಬರು ಆರೋಪಿಗಳ ಬಳಿ ಸುಮಾರು 150 ಗ್ರಾಂ ಗಾಂಜಾ ಪತ್ತೆಯಾಗಿದೆ, ಈ ಬಗ್ಗೆ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎನ್.ಎ.ಕುಂಞ ಅಹಮದ್, ಸಿಪಿಐ ಲೋಹಿತ್ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಅಭಿ ಎಂಬ ಯುವಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Comments are closed.