ತುಮಕೂರು: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರ ಪಾಲಿಕೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನವೆಂಬರ್ 24ರಂದು ನಡೆಯಲಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದ ನಂತರ ಮಾತನಾಡಿ, ಶಾಂತಿಯ ಸಂದೇಶ ಸಾರುವ ಸಲುವಾಗಿ ಜಿಲ್ಲೆಯಾದ್ಯಂತ ಕ್ರೀಡಾಜ್ಯೋತಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ, ಕ್ರೀಡಾ ಜ್ಯೋತಿಯು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವ ಭಾವನೆಯಿಂದ ಬಾಳಬೇಕೆಂಬ ಸಂದೇಶ ಸಾರಲಿದೆ, ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಸಚಿವ ಪರಮೇಶ್ವರ್ ಧರ್ಮಪತ್ನಿ ಕನ್ನಿಕಾ ಪರಮೇಶ್ವರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಪಾಲಿಕೆ ಆಯುಕ್ತರಾದ ಬಿ.ವಿ.ಆಶ್ವಿಜ, ತುಮಕೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ವೆಂಕಟೇಶ್ವರಲು, ಹಿರಿಯ ಪತ್ರಕರ್ತ ಎಸ್.ನಾಗಣ್ಣ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ರಘುರಾಮ್, ಕ್ರೀಡಾಕೂಟದ ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಟಿ.ಎನ್.ಮಧುಕರ್, ಶಾಂತರಾಜು, ಡಿ.ಎಂ.ಸತೀಶ್, ಕ್ರೀಡಾ ಸಮಿತಿ ಸಂಚಾಲಕ ಸತೀಶ್ ಹಾರೋಗೆರೆ, ಯಶಸ್, ಹರೀಶ್ ಆಚಾರ್ಯ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಭಾಗವಹಿಸಿದ್ದರು.
Comments are closed.