ಕುಣಿಗಲ್: ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲ ಹಳ್ಳಿ ಗ್ರಾಮದ ಬಳಿ ಸಾರಿಗೆ ಸಂಸ್ಥೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಕೋನಹಳ್ಳಿ ಜಲಾಶಯದ ನೀರು ಸರಬರಾಜು ಉಪ ಕಾಲುವೆಗೆ ಇಳಿದಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ದೊಡ್ಡಕಲ್ಲ ಹಳ್ಳಿ ಗ್ರಾಮದಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗ್ರಾಮದಿಂದ ಸ್ವಲ್ಪ ದೂರ ಬಂದ ನಂತರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉಪಕಾಲುವೆಗೆ ಇಳಿದಿದೆ, ಬಸ್ಸಿನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಹೆಚ್ಚಿನದಾಗಿ ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ, ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೆಲವರು ಅಮೃತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇನ್ನು ಕೆಲವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ, ಬಸ್ ಉಪ ಕಾಲುವೆಗೆ ಇಳಿದ ಕಾರಣ ಪ್ರಯಾಣಿಕರು ಚೀರಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.