ತುಮಕೂರು: ದೇಶದ ತಲಾದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗಲು ಸಾಧ್ಯ, ಯಾವುದೇ ದೇಶದ ಅಭಿವೃದ್ಧಿಯು ಹಳ್ಳಿ, ತಾಲ್ಲೂಕು, ಜಿಲ್ಲೆಗಳ ಅಭಿವೃದ್ಧಿಯ ಮೇಲೆ ನಿಂತಿದೆ, ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ, ಎಲ್ಲಾ ಧರ್ಮ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗುತ್ತದೆ, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆ ಜಾರಿ ಮಾಡಿದೆ, ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ, ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್ ಗೌಡ, ಹೆಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಸಿ.ಬಿ. ಸುರೇಶ್ ಬಾಬು, ಆರ್.ರಾಜೇಂದ್ರ, ಚಿದಾನಂದ ಎಂ.ಗೌಡ, ಮಾಜಿ ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಸೇರಿದಂತೆ ಮತ್ತಿತರ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು.
Comments are closed.