ಕುಣಿಗಲ್: ಸೋಮವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾದ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರ ತಂದೆ ಡಾ.ದೊಡ್ಡಯ್ಯ(91) ಅಂತ್ಯಕ್ರಿಯೆ ಶಾಸಕರ ಸ್ವಗ್ರಾಮ ತಾಲೂಕಿನ ಹುತ್ರಿದುರ್ಗ ಹೋಬಳಿಯ ಆಲ್ಕೆರೆ ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನೆರವೇರಿಸಲಾಯಿತು.
ಡಾ.ದೊಡ್ಡಯ್ಯ ಕೆಲಕಾಲ ಅಸ್ವಸ್ಥತೆಯಿಂದ ಬಳಲುತ್ತಿದ್ದು ಸೋಮವಾರ ಸಂಜೆ ನಿಧನರಾದರು, ಮಂಗಳವಾರ ಮಧ್ಯಾನ ಆಲ್ಕೆರೆ ಹೊಸಹಳ್ಳಿ ಗ್ರಾಮಕ್ಕೆ ಮೃತ ದೇಹ ತರಲಾಯಿತು, ಸಂಬಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅಂತ್ಯಕ್ರಿಯೆ ಪೂರ್ಣಗೊಳ್ಳುವ ವರೆಗೂ ಹಾಜರಿದ್ದರು, ಗೃಹಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕ ಶಿವರಾಮೇಗೌಡ, ಮಾಜಿ ಸಚಿವ ಡಿ.ನಾಗರಾಜಯ್ಯ, ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ತಾಲೂಕಿನ ವಿವಿಧ ಸಂಘ ಸಂಸ್ಥೆ ಪ್ರಮುಖರು, ವಿವಿಧ ಶಾಸಕರು, ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು, ಮೃತರ ಆತ್ಮಕ್ಕೆ ಶಾಂತಿ ಕೋರಿ ಸರ್ವಧರ್ಮ ಪ್ರಾರ್ಥನೆ ನೆರವೇರಿಸಲಾಯಿತು.
ಆಲ್ಕೆರೆ ಹೊಸಹಳ್ಳಿಯಲ್ಲಿ ಡಾ.ದೊಡ್ಡಯ್ಯ ಅಂತ್ಯಕ್ರಿಯೆ
Get real time updates directly on you device, subscribe now.
Prev Post
Next Post
Comments are closed.