ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡನೀಯ

ಹಿಂದೂ ಹಿತ ರಕ್ಷಣಾ ವೇದಿಕೆಯಿಂದ ಇಂದು ಬೃಹತ್ ಪ್ರತಿಭಟನೆ

2

Get real time updates directly on you device, subscribe now.


ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯ ಖಂಡಿಸಿ ಇದೇ 4 ರಂದು ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘಸಂಸ್ಥೆಗಳ ಮುಖಂಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು.
ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಸಖಲ ಜೀವಿಗಳಿಗೂ ಲೇಸು ಬಯಸುವುದೇ ಎಲ್ಲಾ ಧರ್ಮಗಳ ಆಶಯವಾಗಿದೆ, ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ, ಇಲ್ಲಿ ಎಲ್ಲರೂ ಸಮಾನವಾಗಿ ಬದುಕಲು ಆಶ್ರಯ ನೀಡಿದೆ, ಆದರೆ ಹಿಂಸೆ ಪ್ರತಿಪಾದಿಸುತ್ತಾ ದೌರ್ಜನ್ಯ ಮಾಡುವುದನ್ನು ಯಾವ ಧರ್ಮವೂ ಒಪ್ಪುವುದಿಲ್ಲ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು.

ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಮುಖಂಡರಾದ ಪಂಚಾಕ್ಷರಯ್ಯ, ನೇತಾಜಿ ಮೋಹನ್ ಕುಮಾರ್, ಪಚ್ಚೇಶ್ ಅಣೇಕಾರ್, ಕೆ.ಪಿ.ಮಹೇಶ್, ರಾಮಚಂದ್ರರಾವ್, ಶೀತಕಲ್ ಕೃಷ್ಣಯ್ಯ, ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!