ತುಮಕೂರು: ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವ ಅನುಕೂಲಸ್ಥರು ಸ್ವಯಂ ಪ್ರೇರಣೆಯಿಂದ ಪಡಿತರ ಚೀಟಿ ಹಿಂದಿರುಗಿಸಿದರೆ ಮತ್ತಷ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸಲು ಅನುಕೂಲವಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ನಗರದ ಕುಣಿಗಲ್ ರಸ್ತೆಯ ಅಮರಜ್ಯೋತಿ ನಗರದಲ್ಲಿರುವ ಶ್ರೀಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿ, ಉಳ್ಳವರು, ಶ್ರೀಮಂತರು ಬಿಪಿಎಲ್ ಕಾರ್ಡ್ಗಳನ್ನು ಪಡೆದಿದ್ದಾರೆ, ಅಂತಹವರು ತಾವಾಗಿಯೇ ಕಾರ್ಡ್ಗಳನ್ನು ವಾಪಸ್ ನೀಡಿದರೆ ಬಡವರಿಗೆ ಮತ್ತಷ್ಟು ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲು ಅನುಕೂಲವಾಗುತ್ತದೆ ಎಂದರು.
ಭಾರತ ದೇಶದಲ್ಲೇ ಅತಿ ಹೆಚ್ಚು ಪಡಿತರ ಚೀಟಿಗಳನ್ನು ವಿತರಿಸಿರುವ ರಾಜ್ಯ ಕರ್ನಾಟಕ, ನಮ್ಮ ರಾಜ್ಯದಲ್ಲಿರುವ 7 ಕೋಟಿ ಜನರ ಪೈಕಿ ಶೇ. 70 ರಷ್ಟು ಫಲಾನುಭವಿಗಳಿಗೆ ಪಡಿತರ ಚೀಟಿ ಹಂಚಿಕೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 4.50 ಕೋಟಿ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗಿದೆ, ಇದರ ಸದುಪಯೋಗ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಅವರು ಹೇಳಿದರು.
ಮಾಜಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ನಾವಿಬ್ಬರೂ ಸಾಯಿಬಾಬ ಭಕ್ತರು, ಮೊದಲಿನಿಂದಲೂ ನಾವೆಲ್ಲರೂ ಸ್ನೇಹಿತರು, ಮುನಿಯಪ್ಪರವರು ಬಡವರ ಪರ ಕಾಳಜಿಯುಳ್ಳವರು, ಇದಕ್ಕೆ ಪೂರಕವಾಗಿ ಬಡವರಿಗೆ ಸಹಾಯ ಮಾಡುವಂತಹ ಖಾತೆ ಸಿಕ್ಕಿದೆ. ಹಾಗಾಗಿ ಬಡವರಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಕೆಲಸ ಮಾಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್. ಬಸವರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೆಸ್ವಾಮಿ, ರಕ್ಷಿತ್ ಮತ್ತಿತರರು ಹಾಜರಿದ್ದರು.
Comments are closed.