ತುಮಕೂರು: ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು, ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ಧ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಸಂಯುಕ್ತ ಹೋರಾಟ- ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು.
ಸಂಯುಕ್ತ ಹೋರಾಟ- ಕರ್ನಾಟಕದ ಸಂಚಾಲಕ ಸಿ.ಯತಿರಾಜು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪ್ರಾಂತ ರೈತ ಸಂಘದ ಬಿ.ಉಮೇಶ್, ಎಐಕೆಎಸ್ ನ ಗಿರೀಶ್, ಎಐಕೆಕೆಎಸ್ ನ ಎಸ್.ಎನ್.ಸ್ವಾಮಿ ಹಾಗೂ ಇತರೆ ರೈತಮುಖಡರ ನೇತೃತ್ವದಲ್ಲಿ ನಗರದ ಸ್ವಾತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತೊಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.
ಈ ವೇಳೆ ರೈತ ಸಂಘದ ಎ.ಗೋವಿಂದರಾಜು ಮಾತನಾಡಿ, ಜಿಲ್ಲೆಯ ಹಲವಾರು ಹಿರಿಯರ ಹೋರಾಟದ ಫಲವಾಗಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಹರಿದಿದೆ, ಆದರೆ ಕುಣಿಗಲ್ ತಾಲೂಕು ತೋರಿಸಿ ನಮ್ಮ ಜಿಲ್ಲೆಯ ನೀರನ್ನು ಕದಿಯುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ ಎಂದರು.
ಪ್ರಾಂತ ರೈತ ಸಂಘದ ಬಿ.ಉಮೇಶ್, ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿರೋಧಿ ಮುಷ್ಕರದಲ್ಲಿ ರೈತ ಮುಖಂಡರಾದ ಎಸ್.ಎನ್.ಸ್ವಾಮಿ, ಜಿ.ಶಂಕರಪ್ಪ, ಗಿರೀಶ್, ಕಂಬೇಗೌಡ, ಸೈಯದ್ ಮುಜೀಬ್, ಚಿಕ್ಕ ಬೋರೇಗೌಡ, ಗುಬ್ಬಿಯ ಲೋಕೇಶ್, ಕೊರಟಗೆರೆಯ ಶಬ್ಬೀರ್, ಮಹಿಳಾ ಘಟಕದ ನಾಗರತ್ನ, ಭಾಗ್ಯಮ್ಮ, ಅಜ್ಜಪ್ಪ ಇತರರು ಇದ್ದರು.
Comments are closed.