ಮಕ್ಕಳ ಕುಂಚದಲ್ಲಿ ಅರಳಿದ ಚಿತ್ರಕಲೆ

ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಿಣ್ಣರ ಕಲರವ

14

Get real time updates directly on you device, subscribe now.


ತುಮಕೂರು: ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆಗೆ ತುಮಕೂರು ಜಿಲ್ಲೆಯ ನಾನಾ ಶಾಲೆಗಳಿಂದ ಮಕ್ಕಳು ಶ್ರೀಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನೆರೆದಿದ್ದರು, ಆ ದೃಶ್ಯ ಪುಟಾಣಿ ನಕ್ಷತ್ರಗಳೇ ಇಂಜಿನಿಯರಿಂಗ್ ಕಾಲೇಜಿಗೆ ಆವರಣಕ್ಕೆ ಬಂದಂತೆ ಬಾಸವಾಗುತ್ತಿತ್ತು, ಆ ಮಕ್ಕಳ ಕಲರವವೇ ಕಣ್ಣಿಗೆ ಹಬ್ಬದಂತಿತ್ತು.

ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಭೀಷ್ಮ ದಿವಂಗತ ಡಾ.ಹೆಚ್.ಎಂ.ಗಂಗಾಧರಯ್ಯ ಅವರ ಸ್ಮರಣಾರ್ಥ ತುಮಕೂರು ಜಿಲ್ಲೆಯ ಶಾಲಾ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು,
ಸ್ಫರ್ಧೆ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಚಿತ್ರಕಲಾವಿದ ಸೂರ್ಯ ನಾರಾಯಣ್ ಉದ್ಘಾಟಿಸಿ ನಂತರ ಮಾತನಾಡಿ, ಸೃಷ್ಟಿಕರ್ತ ಪ್ರಕೃತಿಯನ್ನು ಸೃಷ್ಟಿಸಿದ್ದಾನೆ, ಸೃಷ್ಟಿಯಲ್ಲಿನ ಅಂದವನ್ನು ಚಿತ್ರಿಸಲು ಕಲಾವಿದರನ್ನು ಸೃಷ್ಟಿಸಿದ್ದಾನೆ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನವಾಗಿ ಮಹತ್ವ ನೀಡಬೇಕು ಎಂದರು.

ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಗೌರ್ನಿಂಗ್ ಸದಸ್ಯರಾದ ಕನ್ನಿಕಾ ಪರಮೇಶ್ವರಿ, ಸಾಹೇ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ.ಎಂ.ಝೆಡ್ ಕುರಿಯನ್, ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳ ಸಲಹೆಗಾರ ಡಾ.ವಿವೇಕ್ ವೀರಯ್ಯ, ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ, ಎಸ್ ಎಸ್ ಐಟಿಯ ಡೀನ್ (ಅಕಾಡೆಮಿಕ್) ಡಾ.ರೇಣುಕಾ ಲತಾ, ಸಂಯೋಜಕರಾದದ ಡಾ.ರಾಜು ಎ.ಎಸ್.ಡಾ.ಸುನಿಲ್, ಬಿಬಿಎಂ ಪ್ರಾಂಶುಪಾಲರಾದ ಡಾ ಮಮತ, ಎಂಬಿಎ ಪ್ರಾಂಶುಪಾಲ ಡಾ.ಅಜಮತ್ ವುಲ್ಲಾ, ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತಾ ಇತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!