ಗುಬ್ಬಿ: ಗುಬ್ಬಿ ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ರೈಲ್ವೆ ಮೇಲ್ ಸೇತುವೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು 19 ಕೋಟಿ 35 ಲಕ್ಷ ರೂಪಾಯಿ ಮಂಜೂರು ಮಾಡಿದ್ದು ಗುಬ್ಬಿ ನಾಗರಿಕರ ಪರವಾಗಿ ಎನ್ ಡಿಎ ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಕೇಂದ್ರ ಸಚಿವ ವಿ ಸೋಮಣ್ಣ ನವರಿಗೆ ಅಭಿನಂದನೆ ಸಲ್ಲಿಸಿದರು.
ಪಟ್ಟಣದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾಲೂಕಿನ 150 ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ಮಹತ್ವಾಕಾಂಕ್ಷಿ ಯೋಜನೆಯು ಅನುಕೂಲವಾಗಿದೆ, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಪಡಿಸಿದಂತೆ ತುಮಕೂರು ಜಿಲ್ಲೆಯನ್ನು ಇನ್ನೂ ಉನ್ನತ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲಿದ್ದಾರೆ, ಈಗಾಗಲೇ ಜಿಲ್ಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಿದ್ದಾರೆ ಎಂದು ತಿಳಿಸಿದರು.
ಪಪಂ ನಿಕಟ ಪೂರ್ವ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಮಾತನಾಡಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸೋಮಣ್ಣ ನವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದು ತಿಳಿಸಿದರು, ಅವರ ಮಾತಿನಂತೆಯೇ ಅತಿ ವೇಗವಾಗಿ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ, ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಪಂ ಸದಸ್ಯ ಶಿವಕುಮಾರ್, ಮುಖಂಡ ಕೆ.ಬಿ.ಕೃಷ್ಣಪ್ಪ, ರಂಗಸ್ವಾಮಿ ಇತರರು ಹಾಜರಿದ್ದರು.
Comments are closed.