ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ

ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದಾರೆ

1

Get real time updates directly on you device, subscribe now.


ತುಮಕೂರು: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದು, ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧುಸ್ವಾಮಿ ಆರೋಪಿಸಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ತಹಸೀಲ್ದಾರ್ ಗೆ ತಾಲ್ಲೂಕು ಕಚೇರಿಯನ್ನು ಲಂಚ ಮತ್ತು ಭ್ರಷ್ಟಾಚಾರ ಮುಕ್ತ ಮಾಡುವಂತೆ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವಂತೆ ಆಗ್ರಹ ಪತ್ರ ಸಲ್ಲಿಸಿ ಮಾತನಾಡಿ, ತಾಲೂಕು ಕೇಂದ್ರಕ್ಕೆ ಹಲವು ಸಮಸ್ಯೆ ಹೊತ್ತುಕೊಂಡು ಬರುವ ಜನಸಾಮಾನ್ಯರ ಕೆಲಸ ಮಾಡಿಕೊಡುತ್ತಿಲ್ಲ, ದಿನನಿತ್ಯ ಕಚೇರಿಗೆ ಅಲೆದರೂ ಬಡವರ ಕೆಲಸಗಳು ಆಗುತ್ತಿಲ್ಲ, ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯವರ್ತಿಗಳು ಜನ ಸಾಮಾನ್ಯರಿಂದ ಹಣ ಪಡೆದು ಕೆಲಸ ಮಾಡಿ ಕೊಡುತ್ತಿದ್ದಾರೆ, ನೇರವಾಗಿ ಕಚೇರಿಗೆ ಭೇಟಿ ನೀಡಿ ಕೆಲಸ ಮಾಡಿಕೊಡಲು ಮನವಿ ಸಲ್ಲಿಸಿದರೆ ಯಾವುದೇ ಕೆಲಸಗಳು ಆಗುವುದಿಲ್ಲ, ಆದರೆ ಮಧ್ಯವರ್ತಿಗಳು ಕೈ ಹಾಕಿದ ಕೆಲಸಗಳು ಕಚೇರಿಗಳಲ್ಲಿ ಕೆಲವೇ ನಿಮಿಷಗಳಲ್ಲಿ ಮಾಡಿಕೊಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳಾದ ರಘುನಂದನ್, ಚನ್ನಯ್ಯ, ಬೈರೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!